ಕೊಹ್ಲಿ, ಚಾನುಗೆ ಖೇಲ್ ರತ್ನ ಪ್ರಶಸ್ತಿ ನೀಡಲು ಕೇಂದ್ರ ಒಪ್ಪಿಗೆ

20 Sep 2018 1:02 PM | Sports
329 Report

ವಿಶ್ವ ಚಾಂಪಿಯನ್ ವೇಟ್‌ಲಿಫ್ಟರ್ ಮೀರಾ ಬಾಯಿ ಚಾನು ಹಾಗೂ ಭಾರತ ಕ್ರಿಕೆಟ್ ತಂಡದ ನಾಯಕರಾದ ವಿರಾಟ್ ಕೊಹ್ಲಿಗೆ ಖೇಲ್ ರತ್ನ ನೀಡಲು ಕೇಂದ್ರ ಕ್ರೀಡಾ ಸಚಿವಾಲಯ ಒಪ್ಪಿಗೆಯನ್ನು ಸೂಚಿಸಿದೆ.

ದ್ರೋಣಾಚಾರ್ಯ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದ ಆರ್ಚರಿ ಕೋಚ್ ಜೀವನ್‌ಜೋತ್ ತೇಜಾ ಒಬ್ಬರನ್ನು ಬಿಟ್ಟು, ಆಯ್ಕೆ ಸಮಿತಿಯು ಖೇಲ್ ರತ್ನ, ಅರ್ಜುನ ಹಾಗೂ ಧ್ಯಾನ್‌ಚಂದ್ ಪ್ರಶಸ್ತಿ ಗೆ ಶಿಫಾರಸು ಮಾದಿದ್ದ ಎಲ್ಲರಿಗೂ ಪ್ರಶಸ್ತಿ ನೀಡಲು ಒಪ್ಪಿಗೆ ಸಿಕ್ಕಿದೆ. ಸೆ.25ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನಡೆಯಲಿದೆ ಎಂಬ ಮಾಹಿತಿ ತಿಳಿದುಬಂದಿದೆ.

Edited By

Manjula M

Reported By

Manjula M

Comments