'ವಿಶ್ವ ಕಪ್' ಫೈನಲ್ ಪಂದ್ಯದ ಬಗ್ಗೆ ಸಚಿನ್ ಹೇಳಿದ್ದೇನು.?

17 Jul 2019 5:28 PM | Sports
413 Report

ಐಸಿಸಿ ಏಕದಿನ ವಿಶ್ವಕಪ್ ಅನ್ನು ಇಂಗ್ಲೆಂಡ್ ಗೆದ್ದು ಬೀಗುತ್ತಿದೆ.. ವಿಶ್ವಕಪ್ ಸೆಮಿಫೈನಲ್ ನಲ್ಲಿ ಸೋತ ಟೀಂ ಇಂಡಿಯಾದಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ.  ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರನ್ನು ವಜಾಗೊಳಿಸಿ ರೋಹಿತ್ ಶರ್ಮಾ ಗೆ ನಾಯಕನ ಸ್ಥಾನ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.. ರೋಹಿತ್ ಶರ್ಮಾ ಈ ಬಾರಿಯ ವಿಶ್ವಕಪ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ.. ಅದೇ ರೀತಿ ಪಂದ್ಯದ ಬಗ್ಗೆ ಕ್ರಿಕೆಟ್ ದೇವರು ಸಚಿನ್ ಕೂಡ ಮಾತನಾಡಿದ್ದಾರೆ.

ಈ ಬಾರಿಯ ವಿಶ್ವಕಪ್ ಪಂದ್ಯಾವಳಿ ಹಲವು ಅನಿರೀಕ್ಷಿತ ತಿರುವುಗಳಿಗೆ ಸಾಕ್ಷಿಯಾಗಿತ್ತು. ಫೈನಲ್ ತಲುಪಬಹುದೆಂಬ ನಿರೀಕ್ಷೆಯಲ್ಲಿದ್ದ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಮಿಫೈನಲ್ ಹಂತದಲ್ಲಿಯೇ ಹೊರಬಂದವು. ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು, ಇದು ಕೂಡಾ ರೋಚಕ ತಿರುವನ್ನು ಕಂಡಿತ್ತು. ಪಂದ್ಯ ಟೈ ಆದ ಹಿನ್ನಲೆಯಲ್ಲಿ ಎರಡು ತಂಡಗಳಿಗೂ ಕೂಡ ಸೂಪರ್ ಓವರ್ ನೀಡಲಾಗಿತ್ತು. ಇದರಲ್ಲಿ ಅತಿ ಹೆಚ್ಚು ಬೌಂಡರಿ ಗಳಿಸಿದ ಕಾರಣಕ್ಕೆ ಇಂಗ್ಲೆಂಡ್ ತಂಡ ಚೊಚ್ಚಲ ಬಾರಿಗೆ ವಿಶ್ವ ಕಪ್ ನ್ನು ತನ್ನದಾಗಿಸಿಕೊಂಡಿತ್ತು.ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್  ಮ್ಯಾಚ್ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಸೂಪರ್ ಓವರ್ ನಲ್ಲಿ ಗಳಿಸಿದ ಬೌಂಡರಿಗಳ ಆಧಾರದ ಮೇಲೆ ವಿಜೇತ ತಂಡವನ್ನು ನಿರ್ಧರಿಸುವ ಬದಲು ಮತ್ತೊಂದು ಸೂಪರ್ ಓವರ್ ನೀಡಬೇಕಿತ್ತು ಎಂದು ತಿಳಿಸಿದ್ದಾರೆ.. ಟೀಮ್ ಇಂಡಿಯಾ ಉಪ ನಾಯಕ ರೋಹಿತ್ ಶರ್ಮಾ, ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್, ಗೌತಮ್ ಗಂಭೀರ್ ಕೂಡಾ ಬೌಂಡರಿ ಆಧರಿಸಿ ವಿಜೇತರನ್ನು ಘೋಷಿಸಿದ ಐಸಿಸಿ ತೀರ್ಮಾನಕ್ಕೆ ಅಪಸ್ವರ ಎತ್ತಿದ್ದಾರೆ. ಒಟ್ಟಿನಲ್ಲಿ ಈ ಬಾರಿ ರೋಹಿತ್ ಶರ್ಮಾ ಉತ್ತಮ ಪ್ರದರ್ಶನವನ್ನು ನೀಡಿದ್ದರು.

Edited By

Manjula M

Reported By

Manjula M

Comments