ಜೆಡಿಎಸ್ ನ 7 ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

24 Jul 2017 5:19 PM |
4427 Report

ವಿಧಾನಸಭೆ ಚುನಾವಣೆ ಕೆಲವೇ ತಿಂಗಳು ಬಾಕಿಯಿರುವಾಗ ಜಾತ್ಯತೀತ ಜನತಾದಳದ ಬಂಡಾಯ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ.ಜೆಡಿಎಸ್ನ  7 ಬಂಡಾಯ ಶಾಸಕರ ಕಾಂಗ್ರೆಸ್ ಸೇರ್ಪಡೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದಂತಾಗಿದೆ. ಬರುವ ಡಿಸೆಂಬರ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷ ಸೇರುವುದಾಗಿ  ಜೆಡಿಎಸ್ ನ ಬಂಡಾಯ ಶಾಸಕ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಭಾನುವಾರ ತುಮಕೂರಿನ ಮಾಜಿ ಶಾಸಕ ಎಚ್.ನಿಂಗಪ್ಪ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, 'ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದು, ಆ ಪಕ್ಷಕ್ಕೆ ಸೇರಲು ಒಪ್ಪಿಗೆ ಸಿಕ್ಕಿದೆ. ತಮ್ಮ ಜೊತೆಗೆ ಜೆಡಿಎಸ್ ನ 7 ಬಂಡಾಯ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ' ಎಂದು ಹೇಳಿದರು.

ಜೆಡಿಎಸ್ ನ 7 ಬಂಡಾಯ ಶಾಸಕರು 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಷರತ್ತು ಹಾಕಿದ್ದರು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಬಂಡಾಯ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ವಿಳಂಬ ಮಾಡಿತ್ತು. ರಾಜ್ಯಸಭಾ ಚುನಾವಣೆ ಆದ ನಂತರ ಎಲ್ಲಾ ವಿವಾದಗಳಲ್ಲೂ ಈ ಬಂಡಾಯ ಶಾಸಕರು ಕಾಂಗ್ರೆಸ್ ಪರ ನಿಂತಿದ್ದಾರೆ.ಜಮೀರ್ ಹೇಳಿಕೆ ನೋಡಿದರೆ ಶಾಸಕರಾದ ಚಲುವರಾಯಸ್ವಾಮಿ, ಎಚ್.ಸಿ.ಬಾಲಕೃಷ್ಣ, ರಮೇಶ್ ಬಂಡಿ ಸಿದ್ದೇಗೌಡ, ಜಮೀರ್ ಅಹಮ್ಮದ್, ಇಕ್ಬಾಲ್ ಅನ್ಸಾರಿ ಮತ್ತು ಭೀಮಾನಾಯ್ಕ್ ಅವರಿಗೆ ಕಾಂಗ್ರೆಸ್ 2018ರ ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡುವುದು ಖಚಿತವಾಗಿದಂತಾಗಿದೆ.

Edited By

madhu mukesh

Reported By

congress admin

Comments