ತುಮಕೂರಿಗೆ ಹೇಮಾವತಿ ನೀರು ಹರಿಸುವಂತೆ ಬಿಜೆಪಿ ಆಗ್ರಹ

01 Aug 2017 12:25 PM |
1082 Report

ತುಮಕೂರು: ಹೇಮಾವತಿ ನದಿ ನೀರನ್ನು ತುಮಕೂರು ಜಿಲ್ಲೆಗೆ ಹರಿಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಜಿಲ್ಲೆಯ ವಿವಿಧೆಡೆಯಿಂದ ಹೊರಟ ಪಾದಯಾತ್ರೆ ಮಧ್ಯಾಹ್ನದ ವೇಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಸಮಾವೇಶಗೊಂಡಿತು. ಜಿಲ್ಲೆಗೆ ನೀರು ಹರಿಸದ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಬ್ಯಾರಿಕೇಡ್ ತಳ್ಳಿ  ಒಳನುಗ್ಗಲು ಪ್ರಯತ್ನಿಸಿದಾಗ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ನೂಕಾಟ ನಡೆಯಿತು. ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಿದ್ದರಿಂದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ನುಗ್ಗಲು ಸಾಧ್ಯವಾಗಲಿಲ್ಲ. 

Edited By

Admin bjp

Reported By

Admin bjp

Comments