ಬಿಎಸ್ ವೈ ಮಾಜಿ ಆಪ್ತ ಧನಂಜಯ ಕುಮಾರ್ ಕಾಂಗ್ರೆಸ್ಗೆ

04 Aug 2017 10:22 AM |
2478 Report

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಕೇಂದ್ರದ ಮಾಜಿ ಸಚಿವ ವಿ. ಧನಂಜಯಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಗುರುವಾರ ಅಧಿಕೃತವಾಗಿ ಸೇರ್ಪಡೆಗೊಂಡರು.

ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಅವರು ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು. ಇತ್ತೀಚೆಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದಾಗ ಧನಂಜಯಕುಮಾರ್ ಪಕ್ಷ ಸೇರ್ಪಡೆ ಬಗ್ಗೆ ಚರ್ಚಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಧನಂಜಯ ಕುಮಾರ್, 'ಅಧಿಕಾರದ ಆಸೆಯಿಂದ ನಾನು ಕಾಂಗ್ರೆಸ್ ಸೇರುತ್ತಿಲ್ಲ. 2004ರಲ್ಲೇ ಆಹ್ವಾನ ಬಂದಿತ್ತು. ಆದರೆ, ಈಗ ನಿರ್ಧಾರ ತೆಗೆದುಕೊಂಡಿದ್ದೇನೆ' ಎಂದು ಹೇಳಿದರು.

'ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸರ್ವಾಧಿಕಾರಿ ಧೋರಣೆ ಹೊಂದಿದ್ದಾರೆ. ದೇಶದಲ್ಲಿ ಸರ್ವಾಧಿಕಾರಿ ಆಡಳಿತ ನಡೆಯುತ್ತಿದೆ. ಇದು ಕೊನೆಯಾಗಿ ಎಲ್ಲ ಜನರೂ ನೆಮ್ಮದಿಯಿಂದ ಬದುಕಬೇಕು' ಎಂದರು.

'ನನಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನನ್ನ ಒಡನಾಡಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರಾಷ್ಟ್ರ ಹಿತಕ್ಕಾಗಿ ಕಾಂಗ್ರೆಸ್ ಸೇರಿದ್ದೇನೆ. ರಾಹುಲ್ ಗಾಂಧಿ ಅವರಿಗೆ ಒಳ್ಳೆಯ ಭವಿಷ್ಯ ಇದೆ'` ಎಂದರು.

Edited By

civic news

Reported By

congress admin

Comments