ಅರಮನೆ ಮೈದಾನದಲ್ಲಿ ರಾಜ್ಯ ಬಿ.ಜೆ.ಪಿ. ಕಾರ್ಯಕಾರಿಣಿ ಸಭೆ

04 Aug 2017 11:20 AM |
3257 Report

ರಾಜ್ಯದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ಮಾಡಿರುವ ಐ.ಟಿ. ಅಧಿಕಾರಿಗಳು, ಕಳೆದ 3 ದಿನಗಳಿಂದ ಪರಿಶೀಲನೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯ ಬಿ.ಜೆ.ಪಿ. ಕಾರ್ಯಕಾರಿಣಿ ನಡೆಯುತ್ತಿರುವುದು ಮಹತ್ವ ಪಡೆದುಕೊಂಡಿದೆ.

ರಾಜ್ಯ ಬಿ.ಜೆ.ಪಿ. ಕಾರ್ಯಕಾರಿಣಿ ಸಭೆ ಆಗಸ್ಟ್ 5 ಮತ್ತು 6 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.

ಕನ್ನಡಕ್ಕೆ ಪ್ರತ್ಯೇಕ ಧ್ವಜ, ಪಕ್ಷ ಸಂಘಟನೆ, ವಿಸ್ತಾರಕ್ ಯೋಜನೆ, ಲಿಂಗಾಯತ ಧರ್ಮ, ಐ.ಟಿ. ದಾಳಿ, ಬರಗಾಲ, ಮುಂದಿನ ವಿಧಾನಸಭೆ ಚುನಾವಣೆ ತಯಾರಿ ಮೊದಲಾದ ವಿಷಯಗಳ ಕುರಿತಾಗಿ ಕಾರ್ಯಕಾರಿಣಿಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಗಸ್ಟ್ 12 ರಿಂದ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಈ ಕುರಿತಾಗಿಯೂ ಕಾರ್ಯಕಾರಿಣಿಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.

 

Edited By

Admin bjp

Reported By

Admin bjp

Comments