ಅಮಾನತುಗೊಂಡಿರುವ ಜೆಡಿಎಸ್ ಶಾಸಕರ ವಿರುದ್ಧ ಪರ್ಯಾಯ ಅಭ್ಯರ್ಥಿಗಳನ್ನು ಸಿದ್ದಪಡಿಸಿದ ಗೌಡರು

29 Aug 2017 1:24 PM |
2521 Report

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿ ಪಕ್ಷದಿಂದ ಅಮಾನತುಗೊಂಡಿರುವ ಏಳು ಶಾಸಕರ ಕ್ಷೇತ್ರದಲ್ಲಿ ಜೆಡಿಎಸ್ ಪರ್ಯಾಯ ಅಭ್ಯರ್ಥಿಗಳನ್ನು ಸಜ್ಜುಗೊಳಿಸುತ್ತಿದೆ.

ಬಂಡಾಯ ಶಾಸಕ ಜಮೀರ್ ಅಹಮ್ಮದ್ ಖಾನ್ ಕ್ಷೇತ್ರವಾದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಪೈಪೋಟಿ ಹೆಚ್ಚಾಗಿದೆ. ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷ, ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವಾ ಅವರ ಹೆಸರುಗಳು ಕೇಳಿ ಬಂದಿವೆ.

ಬಾವಾ ಕಳೆದ ಬಾರಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿ ಸೋತಿದ್ದರು. ಈಗಾಗಲೇ ಜೆಡಿಎಸ್ ವರಿಷ್ಠರೊಂದಿಗೆ ಒಂದು ಸುತ್ತಿನ ಮಾತುಕತೆಯನ್ನು ಬಾವಾ ನಡೆಸಿದ್ದಾರೆ ಎನ್ನಲಾಗಿದೆ. ಮತ್ತೊಬ್ಬ ಬಂಡಾಯ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಕ್ಷೇತ್ರವಾದ ಪುಲಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಶಿವರಾಜು ಸೇರಿದಂತೆ ಹಲವರ ಹೆಸರುಗಳು ಕೇಳಿ ಬರುತ್ತಿವೆ. ಆದರೂ ಇನ್ನೂ ಈ ಕ್ಷೇತ್ರದ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಂಡ್ಯ ಜಿಲ್ಲೆಯ ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಹಾಗೂ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಬದಲಿಗೆ ಅದೇ ಕ್ಷೇತ್ರದ ಮಾಜಿ ಶಾಸಕ ಸುರೇಶ್‍ಗೌಡ ಅವರನ್ನು ಕಣಕ್ಕಿಳಿಸಲು ಉದ್ದೇಶಿಸಲಾಗಿದೆ. ಹೀಗಾಗಿ ಸುರೇಶ್‍ಗೌಡ ಅವರಿಗೆ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

 

Edited By

Suresh M

Reported By

jds admin

Comments