ಕೆಲಸ ಮಾಡದವರಿಗೆ JDS ನಿಂದ ಗೇಟ್ ಪಾಸ್: ಹೆಚ್.ಡಿ.ಡಿ

13 Sep 2017 10:26 AM |
2387 Report

ಬೆಂಗಳೂರು: ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳದೇ, ಪಕ್ಷದ ಕೆಲಸ ಮಾಡದೇ, ಕೇವಲ ವಿಸಿಟಿಂಗ್ ಕಾರ್ಡ್ ಇಟ್ಟುಕೊಂಡು ಓಡಾಡುವವರನ್ನು ಮುಲಾಜಿಲ್ಲದೇ ಪಕ್ಷದಿಂದ ಹೊರಹಾಕಲಾಗುವುದು ಎಂದು ಮಾಜಿ ಪ್ರಧಾನಿ, ಜೆ.ಡಿ.ಎಸ್. ವರಿಷ್ಠ ಹೆಚ್.ಡಿ. ದೇವೇಗೌಡ ಎಚ್ಚರಿಕೆ ನೀಡಿದ್ದಾರೆ.

ಪಕ್ಷದ ನೂತನ ಪದಾಧಿಕಾರಿಗಳು ಮತ್ತು ಶಾಸಕರ ಸಭೆಯಲ್ಲಿ ಅವರು ಮಾತನಾಡಿ, ಪಕ್ಷದ ನಾಯಕತ್ವ ಸಮರ್ಥವಾಗಿದೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಿದರೆ, ಅಧಿಕಾರ ರಚಿಸುವುದು ಕಷ್ಟವೇನಲ್ಲ ಎಂದು ತಿಳಿಸಿದ್ದಾರೆ.ಪಕ್ಷಕ್ಕಾಗಿ ದುಡಿಯುವವರಿಗೆ ಅವಕಾಶ ಇದ್ದೇ ಇರುತ್ತದೆ. ಕೆಲಸ ಮಾಡದವರನ್ನು ನಾನೇ ಹೊರ ಹಾಕುತ್ತೇನೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಬಂದಿರುವ ಸಮೀಕ್ಷೆಗಳ ಕುರಿತಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಜೆ.ಡಿ.ಎಸ್. ಅಧಿಕಾರಕ್ಕೆ ಬರಬೇಕು. ಕುಮಾರಸ್ವಾಮಿಗೆ ಇನ್ನೊಂದು ಅವಕಾಶ ನೀಡಬೇಕೆಂಬ ಅಭಿಪ್ರಾಯ ಜನರಲ್ಲಿದೆ. ಎಲ್ಲರೂ ಒಟ್ಟಾಗಿ ಶ್ರಮಿಸಿದರೆ, ಅಧಿಕಾರ ರಚಿಸುವುದು ಕಷ್ಟವೇನಲ್ಲ ಎಂದು ಹೇಳಿದ್ದಾರೆ.

Edited By

jds admin

Reported By

jds admin

Comments