“ ಮನೆ, ಮನೆಗೂ ಕಾಂಗ್ರೆಸ್‌ “ಯಶಸ್ಸಿಗೆ ಕಾಂಗ್ರೆಸ್‌ ಶಾಸಕರ ಸಭೆ

15 Sep 2017 12:25 PM |
2329 Report

ಈಗಾಗಲೇ ಪ್ರತಿ ಹದಿನೈದು ದಿನಕ್ಕೊಮ್ಮೆ ಸಭೆಗಳನ್ನು ನಡೆಸಿ ಪಕ್ಷದ ಮುಖಂಡರನ್ನು ನಿರಂತರ ಚಟುವಟಿಕೆಯಲ್ಲಿ ತೊಡಗುವಂತೆ ಮಾಡಿರುವ ವೇಣುಗೋಪಾಲ, ಶುಕ್ರವಾರ ಬೆಂಗಳೂರು ನಗರ ಶಾಸಕರು ಮತ್ತು 2013ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

 

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಅವರು ಶುಕ್ರವಾರದಿಂದ ಮತ್ತೆ ಮೂರು ದಿನ ಪಕ್ಷ ಸಂಘಟನೆ ಕುರಿತಂತೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಎರಡೂ ಸಮಬಲದ ಶಾಸಕರನ್ನು ಹೊಂದಿದೆ. ಹೀಗಾಗಿ, ಕಳೆದ ಬಾರಿಯ ಚುನಾವಣೆಯಲ್ಲಿ ಸೋತ ಕ್ಷೇತ್ರಗಳಲ್ಲಿ ಗೆಲುವು ಪಡೆಯುವುದರ ಜೊತೆಗೆ ಹಾಲಿ ಇರುವ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಕಾರ್ಯತಂತ್ರ ರೂಪಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ರಾಜ್ಯ ಸರ್ಕಾರ ಬೆಂಗಳೂರು ಅಭಿವೃದ್ಧಿಗೆ ನೀಡಿರುವ ಯೋಜನೆಗಳು ಮತ್ತು ಇಂದಿರಾ ಕ್ಯಾಂಟೀನ್‌ ಆರಂಭದ ಕುರಿತು ಜನತೆಗೆ ಮನವರಿಕೆ ಮಾಡಿಕೊಡಲು ಶಾಸಕರು ಕಾರ್ಯಕ್ರಮಗಳನ್ನು ರೂಪಿಸಲು ವೇಣುಗೋಪಾಲ ಸಲಹೆ ನೀಡುವ ಸಾಧ್ಯತೆ ಇದೆ.

ಅಲ್ಲದೆ, ಸೆ. 23ರಂದು ನಗರದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ "ಮನೆ, ಮನೆಗೂ ಕಾಂಗ್ರೆಸ್‌' ಕಾರ್ಯಕ್ರಮ ಉದ್ಘಾಟನೆ ಮಾಡಲು ತೀರ್ಮಾನಿಸಲಾಗಿದೆ. ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಶಾಸಕರು ಶ್ರಮಿಸುವಂತೆ ವೇಣುಗೋಪಾಲ ಸೂಚಿಸುವ ಸಾಧ್ಯತೆ ಇದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

Edited By

Hema Latha

Reported By

congress admin

Comments