2018ರ ವಿಧಾನಸಭೆ ಚುನಾವಣೆಗೆ ದೊಡ್ಡಗೌಡರ ಕುಟುಂಬದ ನಾಲ್ವರು ಕಣಕ್ಕಿಳಿಯಲಿದ್ದಾರೆ

16 Sep 2017 8:03 AM |
4418 Report

ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಜೆಡಿಎಸ್, ಈಗಾಗಲೇ ಬಹುತೇಕ ವಿಧಾನಸಭಾ ಕ್ಷೇತ್ರಗಳಲ್ಲಿನ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿದೆ. ಉಳಿದ ಪಕ್ಷಗಳು ಇನ್ನೂ ತಮ್ಮ ಅಭ್ಯರ್ಥಿಗಳನ್ನು ಕುರಿತು ನಿಖರವಾದ ಆಲೋಚನೆ ಮಾಡಿದರ ಈ ಹೊತ್ತಿನಲ್ಲಿ ಜೆಡಿಎಸ್ ಈಗಾಗಲೇ ತನ್ನ ಪಟ್ಟಿಯನ್ನು ಸಿದ್ಧಪಡಿಸಿದೆ.

ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ವರಿಷ್ಟ, ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ನಾಲ್ವರು ಕಣಕ್ಕಿಳಿಲಿದ್ದಾರೆ ಎಂಬುದು ವಿಶೇಷ , ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ, ಮಾಜಿ ಸಚಿವ ಎಚ್.ಡಿ. ರೇವಣ್ಣ, ಅವರ ಪತ್ನಿ ಭವಾನಿ ಜತೆಗೆ ಮಾಜಿ ಶಾಸಕಿ ಹಾಗೂ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರ ಸ್ವಾಮಿ ಕೂಡಾ ಈ ಬಾರಿಯ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆಂದು ಮೂಲಗಳು ತಿಳಿಸಿವೆ.

Edited By

Suresh M

Reported By

hdk fans

Comments