ಬಿಜೆಪಿಯಿಂದ ಮೆಗಾ ರ್ಯಾಲಿ (rally) ನೆಡಸಲು ಸಿದ್ದತೆ

16 Sep 2017 12:49 PM |
1097 Report

ವಿಸ್ತಾರಕ್ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯವನ್ನು ಓಲೈಸಲು ರಾಜ್ಯ ಬಿಜೆಪಿ ಮೆಗಾ ರ್ಯಾಲಿ ಹಮ್ಮಿಕೊಳ್ಳಲು ಸಿದ್ಧತೆ ನಡೆಸಿದೆ.

ಪಕ್ಷ ಸೇರಿದ ಮುಸ್ಲಿಂ ಯುವಕರನ್ನು ಸ್ವಾಗತಿಸಿ  ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್ ಯಡಿಯೂರಪ್ಪ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅಬ್ದುಲ್ ಅಜೀಂ ಅವರಿಗೆ ರ್ಯಾಲಿ ಆಯೋಜಿಸುವಂತೆ ಸೂಚಿಸಿದ್ದಾರೆ, ಕೇಂದ್ರ ಸಂಪುಟದ ಮುಸ್ಲಿಂ ಸಚಿವರು ರ್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ. 

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಬೆಂಬಲದಿಂದಾಗಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಯಿತು. ಅದರಲ್ಲೂ ಮುಸ್ಲಿಂ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿರುವ ವಿಧಾನ ಸಭೆ ಕ್ಷೇತ್ರಗಳಲ್ಲಿ ಹೆಚ್ಚಿನ ಬೆಂಬಲ ಸಿಕ್ಕಿತು ಎಂದು ಅವರು ತಿಳಿಸಿದ್ದಾರೆ. ಮುಸ್ಲಿಮರ ವಿಚಾರದಲ್ಲಿ ಕಾಂಗ್ರೆಸ್ ವೋಟ್ ಬ್ಯಾಂಕ್ ಪಾಲಿಟಿಕ್ಸ್ ಮಾಡುತ್ತಿದೆ, ಅವರಿಂದ ಕೇವಲ ಮತ ಪಡೆಯುತ್ತಿರುವ ಕಾಂಗ್ರೆಸ್ ಅವರಿಗೆ ಅಗತ್ಯವಿರುವ ಯಾವುದೇ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂಜು ಆರೋಪಿಸಿದರು. ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ತತ್ವ ಕರ್ನಾಟಕ ವಿಧಾನ ಸಭೆ ಚುನಾವಣೆಗೆ ಸಹಾಯ ಮಾಡುತ್ತದೆ ಎಂಬುದು ಯಡಿಯೂರಪ್ಪ ಅಭಿಪ್ರಾಯ.

Edited By

Shruthi G

Reported By

Admin bjp

Comments