ಗೌಡರ ಕುಟುಂಬದಿಂದ ವಿಧಾನಸಭಾ ಚುನಾವಣೆಗೆ ಯಾರೆಲ್ಲಾ ಸ್ಪರ್ಧಿಸುತ್ತಿದ್ದಾರೆ ?

21 Sep 2017 1:57 PM |
2367 Report

 ಜೆಡಿಎಸ್ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ  ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿದೆ. ಉಳಿದ ಪಕ್ಷಗಳು ಇನ್ನೂ ತಮ್ಮ ಅಭ್ಯರ್ಥಿಗಳನ್ನು ಕುರಿತು ನಿಖರವಾದ ಆಲೋಚನೆ ಮಾಡುತ್ತಿದ್ದರೆ, ಇತ್ತ  ಜೆಡಿಎಸ್ ಈಗಾಗಲೇ ತನ್ನ ಪಟ್ಟಿಯನ್ನು ಸಿದ್ಧಪಡಿಸಿದೆ.

ಆದರೆ, ಅದಕ್ಕಿಂತ ಮುಖ್ಯವಾದ ವಿಚಾರವೇನೆಂದರೆ, ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಹಿರಿಯ, ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದಿಂದ ನಾಲ್ವರು  ಈ ಬಾರಿ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ.
ಜೆಡಿಎಸ್ ಪಕ್ಷದಲ್ಲಿ  ಈ ಬಾರಿ ಚುನಾವಣೆಯ ವಿಶಿಷ್ಟವೆಂದರೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ. ರೇವಣ್ಣ, ಅವರ ಪತ್ನಿ ಭವಾನಿ ಜೊತೆಗೆ ಮಾಜಿ ಶಾಸಕಿ ಹಾಗೂ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಕೂಡಾ ಈ ಬಾರಿಯ ಚುನಾವಣೆಯಲ್ಲಿ ಸ್ಫರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

Edited By

Hema Latha

Reported By

jds admin

Comments