ಬಿಬಿಎಂಪಿ ಮೈತ್ರಿಗೆ ಹೋಗಿದ್ದ ರಾಮಲಿಂಗಾ ರೆಡ್ಡಿಗೆ ಎಚ್ ಡಿ ಕೆ ಹೇಳಿದ್ದೇನು?

21 Sep 2017 4:10 PM |
6132 Report

ಬೆಂಗಳೂರು : ಶೀಘ್ರದಲ್ಲೇ ನಡೆಯಲಿರುವ ಬಿಬಿಎಂಪಿ ಮೇಯರ್ ಹುದ್ದೆಯ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಕಸರತ್ತು ಆರಂಭಿಸಿರುವ ಕಾಂಗ್ರೆಸ್ ಮುಂದೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಮೇಯರ್ ಪಟ್ಟವನ್ನು ಜೆಡಿಎಸ್ ಪಕ್ಷಕ್ಕೇ ನೀಡುವಂತೆ ಬೇಡಿಕೆಯಿಟ್ಟಿದ್ದಾರೆಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಕುಮಾರ ಸ್ವಾಮಿ ಅವರು, ಮೇಯರ್ ಪಟ್ಟಕ್ಕೆ ಪಟ್ಟು ಹಿಡಿದಿದ್ದಾರೆ. ಅಲ್ಲದೆ, ಬಿಬಿಎಂಪಿಯ ಕೆಲವಾರು ಸ್ಥಾಯಿ ಸಮಿತಿಗಳ ಸದಸ್ಯರನ್ನು ಬದಲಾಯಿಸುವಂತೆ ಆಗ್ರಹಿಸಿದ್ದಾರೆ. ಆದರೆ, ಈ ಬಗ್ಗೆ ನಿರ್ಧಾರ ಕೈಗೊಳ್ಳಲು ನನ್ನೊಬ್ಬನಿಂದಲೇ ಸಾಧ್ಯವಿಲ್ಲ. ಅದನ್ನು ಪಕ್ಷದ ನಾಯಕರು ನಿರ್ಧರಿಸುತ್ತಾರೆ ಎಂದು ರಾಮಲಿಂಗಾ ರೆಡ್ಡಿ ಸುದ್ದಿಗಾರರೊಂದಿಗೆ ಹೇಳಿದರು..

ಮಾತುಕತೆ ವೇಳೆ ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸುವುದಷ್ಟೇ ನನ್ನ ಕೆಲಸ. ಹಾಗಾಗಿ, ಎಚ್ ಡಿಕೆ ಅವರ ಬೇಡಿಕೆಗಳನ್ನು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನ ಇತರ ನಾಯಕರ ಮುಂದಿಡಲಾಗುವುದು ಎಂದು ತಿಳಿಸಿದರು.

Edited By

hdk fans

Reported By

hdk fans

Comments