ಸರ್ಕಾರ ಬಡ ರೈತರ ಬದುಕಿನ ಜೊತೆಗೆ ಚಲ್ಲಾಟವಾಡುತ್ತಿವೆ : ಎಚ್ ಡಿಕೆ ಆಕ್ರೋಶ

25 Nov 2017 3:06 PM |
572 Report

ಬೀದರ್ ಜಿಲ್ಲೆ ಬಸವಕಲ್ಯಾಣ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, 'ಕೇಂದ್ರ ಮತ್ತು ರಾಜ್ಯ ಸರಕಾರ ಬಡ ರೈತರ ಬದುಕಿನ ಜೊತೆಗೆ ಚಲ್ಲಾಟವಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ನಿಂದ ಸ್ಪರ್ಧಿಸುವ 150 ಅಭ್ಯರ್ಥಿಗಳ ಪಟ್ಟಿ ಸಿದ್ದಗೊಂಡಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ರೈತರು ಕಷ್ಟಪಟ್ಟು ಬೆಳೆದ ಬೆಳೆಗೆ ಸರಕಾರದಿಂದ ಉತ್ತಮ ಬೆಲೆ ಸಿಗುತ್ತಿಲ್ಲ. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸರಕಾರಕ್ಕೆ ಅನುಕೂಲವಾಗಿದೆ ವಿನಹ ರೈತರಿಗಲ್ಲಾ. ಶ್ರೀಮಂತ ಉದ್ಯಮಿಗಳ ಪರ ಕೇಂದ್ರ ಕೆಲಸ ಮಾಡುತ್ತಿದೆ' ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಸರಕಾರ ಅವಕಾಶವನ್ನೆ ಕೊಡಲಿಲ್ಲ. ಸ್ವತಃ ಕಾಂಗ್ರೆಸ್ ಸರಕಾರದ ಶಾಸಕರೇ ತಮ್ಮ ಸರಕಾರದ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದಾರೆ.ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಲ್ಪಸಂಖ್ಯಾತರನ್ನ ರಕ್ಷಿಸುತ್ತಿಲ್ಲ. ಬದಲಾಗಿ ಅವರನ್ನ ತುಳಿಯುವ ಕೆಲಸ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ರಾಜ್ಯದ 14 ಚೆಕ್ ಪೋಸ್ಟ್ ಗಳಲ್ಲಿ ಹಗಲ ದರೋಡೆ ನಡೆಯುತ್ತಿದೆ. ಆ ಹಣ ಸರಕಾರದ ಬೊಕ್ಕಸಕ್ಕೆ ಸೇರುತ್ತಿದೆ ಅಂತ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

Edited By

Shruthi G

Reported By

hdk fans

Comments