ಪ್ರಜ್ವಲ್‌ಗೆ ಟಿಕೆಟ್‌ ನೀಡುವ ಬಗ್ಗೆ ಎಚ್ ಡಿಕೆ ಹೇಳಿದ್ದು ಹೀಗೆ

04 Dec 2017 10:54 AM |
2455 Report

ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್‌ ರೇವಣ್ಣ ಕೂಡ ವಿಧಾನಸಭೆ ಚುನಾವಣೆಗೆ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ ಎಂದು ಸ್ವತಃ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರ, ದಾಸರಹಳ್ಳಿ, ಯಲಹಂಕ, ರಾಜರಾಜೇಶ್ವರಿ ನಗರ ಹಾಗೂ ಹೆಬ್ಟಾಳ ಐದು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಸಭೆ ನಡೆಸಿ, ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಪ್ರಜ್ವಲ್‌ ರೇವಣ್ಣ ಕೂಡ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಈ ಬಗ್ಗೆ ಕಾರ್ಯಕರ್ತರ ಜತೆ ಮಾತುಕತೆ ನಡೆಸಿ ನಂತರ ಯಾರಿಗೆ ಟಿಕೆಟ್‌ ನೀಡಬೇಕೆನ್ನುವುದನ್ನು ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು. ಡಿಸೆಂಬರ್‌ ಅಂತ್ಯದೊಳಗೆ ಜೆಡಿಎಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುತ್ತೇವೆ. ಆ ನಂತರ ಎರಡನೇ ಹಂತದ ಕುಮಾರಪರ್ವ ಯಾತ್ರೆ ಆರಂಭಿಸುವುದಾಗಿ ಹೇಳಿದರು.

 

 

 

Edited By

Shruthi G

Reported By

hdk fans

Comments