ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮುಹೂರ್ತ ಫಿಕ್ಸ್?

08 Dec 2017 1:57 PM |
499 Report

ರಾಜ್ಯದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಹುಮತದಿಂದ ಗೆದ್ದು ಅಧಿಕಾರದ ಗದ್ದುಗೆ ಏರುವ ಪಣ ತಟ್ಟಿರುವ ಜೆಡಿಎಸ್ ಡಿ. 15 ರಂದು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಜೆಡಿಎಸ್ ವರಿಷ್ಠರು ಸಂಭವನೀಯ ಅಭ್ಯರ್ಥಿಗಳ ಹೆಸರುಗಳನ್ನು ತೀರ್ಮಾನಿಸಿದ್ದು, 140 ರಿಂದ 150 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

ರಾಜ್ಯದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಹುಮತದಿಂದ ಗೆದ್ದು ಅಧಿಕಾರದ ಗದ್ದುಗೆ ಏರುವ ಪಣ ತಟ್ಟಿರುವ ಜೆಡಿಎಸ್ ಡಿ. 15 ರಂದು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಪಣತೊಟ್ಟಿರುವ ಜೆಡಿಎಸ್ ಈಗಾಗಲೇ ಶ‍್ರಮ ವಹಿಸಿ ಸಭೆಗಳು, ಸಮಾವೇಶ ಮತ್ತಿತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇನ್ನು ಕುಮಾರಸ್ವಾಮಿ ಅವರು ವಿಧಾನಸಭಾ ಕ್ಷೇತ್ರವಾರು ಪ್ರವಾಸ ಮಾಡಿ ಸಂಭವನೀಯ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಿದ್ದು, 33 ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗುತ್ತಿದೆ. ಒಂದೊಂದು ಕ್ಷೇತ್ರದಲ್ಲಿ ಹೆಚ್ಚು ಮಂದಿ ಆಕಾಂಕ್ಷಿಗಳಿದ್ದಾರೆ. ಅಂಥವರಲ್ಲಿ ಒಬ್ಬರನ್ನು ಆಯ್ಕೆ ಮಾಡಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುತ್ತಿದೆ. ಚುನಾವಣೆಯಲ್ಲಿ ಬಹು ಮತ ಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂಬ ಮಹದಾಸೆ ಹೊಂದಿರುವ ಜೆಡಿಎಸ್ 170 ಕ್ಷೇತ್ರಗಳನ್ನು ಹೆಚ್ಚು ಕೇಂದ್ರೀಕರಿಸಿ ಕಾರ್ಯ ಪ್ರಾರಂಭಿಸಿದೆ ಎಂದು ಹೇಳಲಾಗುತ್ತಿದೆ. 

Edited By

hdk fans

Reported By

hdk fans

Comments