ಅಲ್ಪಸಂಖ್ಯಾತರು ಜೆಡಿಎಸ್ ಪರ ನಿಂತಿದ್ದಾರೆ : ಜಾಕೀರ್

09 Jan 2018 3:58 PM |
553 Report

ರಾಜ್ಯದಲ್ಲಿ ಕಾಂಗ್ರೆಸ್‍ನ ದುರಾಡಳಿತವನ್ನು ಅಲ್ಪಸಂಖ್ಯಾತರು ವಿರೋಧಿಸುವಂತೆ ತಾಲೂಕಿನಲ್ಲಿ ಮುಂದಿನ ಚುನಾವಣೆ ವೇಳೆ ಶೇ. 80ರಷ್ಟು ಅಲ್ಪಸಂಖ್ಯಾತರು ಜೆಡಿಎಸ್ ಪರ ನಿಲ್ಲಲಿದ್ದಾರೆ ಎಂದು ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಝಕಾರಿಯಾ ಜಾಕೀರ್ ಹೇಳಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 70 ವರ್ಷದಿಂದ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷ ಯಾವುದೇ ಸ್ಥಾನಮಾನ ನೀಡದೇ ಕೇವಲ ಚುನಾವಣೆಗೋಸ್ಕರ ಮುಸ್ಲಿಂರ ಪರ ಭಾಷಣ ಮಾಡಿ ವಂಚಿಸುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಮುಸ್ಲಿಂರು ತಕ್ಕ ಉತ್ತರ ನೀಡಲು ಮುಂದಾಗಿದ್ದಾರೆ ಎಂದರು. ಈ ಕ್ಷೇತ್ರದಲ್ಲಿ ಬಿ.ಬಿ.ನಿಂಗಯ್ಯ ಶಾಸಕರಾದ ನಂತರ ಪ್ರಾರ್ಥನಾ ಮಂದಿರಗಳಿಗೆ 2 ಕೋಟಿ ಅನುದಾನ ನೀಡಿದ್ದಾರೆ. ಆದರೆ, ಇದೂವರೆಗೆ ಆಡಳಿತ ನಡೆಸಿದ ಕಾಂಗ್ರೆಸ್ ಮುಸ್ಲಿಂರಿಗೆ ಯಾವ ಕೊಡಗೆ ನೀಡಿದ್ದಾರೆಂಬುದನ್ನು ಬಹಿರಂಗಪಡಿಲಿ ಎಂದು ಸವಾಲು ಹಾಕಿದರು. ಕ್ರೇತ್ರದಲ್ಲಿ ಕಾಂಗ್ರೆಸ್‍ನಲ್ಲಿ ಗುರುತಿಸಿಕೊಂಡಿದ್ದ ಹಿರಿಯ ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್‍ಗೆ ಸೇರ್ಪಡೆಯಾಗಿರುವುದು ಕಾಂಗ್ರೆಸ್‍ನವರಿಗೆ ಭಯ ಹುಟ್ಟಿಸಿದೆ. ಹಾಗಾಗಿ ಜೆಡಿಎಸ್ ಕಾರ್ಯಕರ್ತರನ್ನು ಕರೆಸಿಕೊಂಡು ಕಾಂಗ್ರೆಸ್‍ಗೆ ಸೇರ್ಪಡೆಗೊಳಿಸುತ್ತಿದ್ದಾರೆಂದುಮಾಹಿತಿ ನೀಡುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು.

Edited By

hdk fans

Reported By

hdk fans

Comments