ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳು ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲ : ಎಚ್ ಡಿಕೆ

20 Jan 2018 5:50 PM |
659 Report

ರೈತರ ಸಾಲಮನ್ನಾ ಹೆಸರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡೋಂಗಿತನ ಪ್ರದರ್ಶಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.ಸಹಕಾರ ಸಂಘಗಳಿಂದ 8 ಸಾವಿರ ಕೋಟಿ ರೈತ ಸಾಲಮನ್ನಾ ಮಾಡಿದ್ದೇವೆ ಎಂದು ಎಲ್ಲೆಡೆ ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಲಮನ್ನಾದ ನಯಪೈಸೆಯೂ ರೈತರಿಗೆ ತಲುಪಿಲ್ಲ ಸಾಲವೂ ಮನ್ನಾವಾಗಿಲ್ಲ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಎಲ್ಲಾ ಸಾಲವನ್ನು ಮನ್ನಾ ಮಾಡಲಾಗುವುದು. ರೈತರ ಕಲ್ಯಾಣಕ್ಕಾಗಿ ಕೃಷಿ ಸುಧಾರಿತಾ ಹಲವು ಯೋಜನೆಗಳನ್ನು ಜಾರಿಗೆ ತಂದು ಅನ್ನದಾತರ ಹಿತ ಕಾಪಾಡುವುದಾಗಿ ತಿಳಿಸಿದರು.ರಾಜ್ಯದಲ್ಲಿ ಪಕ್ಷ ಸಂಘಟನೆಯಲ್ಲಿ ಹಿಂದೆ ಬಿದ್ದಿರುವುದು ನಿಜ. ಮುಂದಿನ ದಿನಗಳಲ್ಲಿ ಅದನ್ನು ಸರಿಪಡಿಸಿಕೊಂಡು ಚುನಾವಣೆಗೆ ಸಜ್ಜಾಯಾಗುತ್ತವೆ ಎಂದ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳು ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಹೀಗಾಗಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ಜನರಿಗೆ ಮನವಿ ಮಾಡಿದರು.

ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅಲ್ಲದೆ ಈ ಭಾಗದಲ್ಲಿ ತೊಗರಿಬೇಳೆ ಬೆಳೆದರು ಅದನ್ನು ಖರೀದಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿಲ್ಲ. ಬಿಎಸ್ಎಸ್‌ಕೆ ಕಾರ್ಖಾನೆ ಜಿಲ್ಲೆಯಲ್ಲಿ ಅತಿದೊಡ್ಡ ಸಕ್ಕರೆ ಕಾರ್ಖಾನೆಯಾಗಿದ್ದು, ಅದರ ಪುನರ್ ಜೀವನ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದರು.ಕಾಂಗ್ರೆಸ್ ಸರ್ಕಾರ ಸಮಾವೇಶ ಮಾಡಲು ಹೊರಟಿದ್ದರೆ, ಬಿಜೆಪಿ ಪಕ್ಷ ಪರಿವರ್ತನಾ ಱ್ಯಾಲಿ ಮಾಡುತ್ತಾ ಜನರಿಗೆ ಟೊಳ್ಳು ಭರವಸೆ ನೀಡಲಾಗುತ್ತದೆ. ಈ ಮೂಲಕ ಜನರಿಗೆ ಮಂಕು ಬೂದಿ ಎರಚುವ ಕೆಲಸ ಮಾಡಲಾಗುತ್ತದೆ. ಕಾಂಗ್ರೆಸ್ ಬರೀ ಜಾಹೀರಾತಗಾಗಿ ನೂರೂರು ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತದೆ. ಬೀದರ್ ಜಿಲ್ಲೆಯಲ್ಲಿ ಕಾರಂಜ ಯೋಜನೆ ಹಲವು ವರ್ಷಗಳಿಂದ ನಡೆಯುತ್ತಿದೆ. ಅದು ಇನ್ನು ಪೂರ್ಣಗೊಂಡಿಲ್ಲ ಎಂದು ದೂರಿದರು. ದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳು ಬೋಪೊರ್ಸ್ ಹಗರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಶಿಕ್ಷೆ ನೀಡುವಲ್ಲಿ ವಿಫಲವಾಗಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಯವರು ದೂರಿದರು.

 

Edited By

Shruthi G

Reported By

hdk fans

Comments