ಮಾಜಿ ಶಾಸಕ ಸ್ವಾಮಿರಾವ್ ಹೇಳಿಕೆಗೆ ತಿರುಗೇಟು ಕೊಟ್ಟ ಜೆಡಿಎಸ್ ನಾಯಕ ಮಧು ಬಂಗಾರಪ್ಪ

13 Mar 2018 6:17 PM |
4275 Report

ಚುನಾವಣಾ ದಿನಾಂಕ ಘೋಷಣೆಗೂ ಮೊದಲೇ ಜೆಡಿಎಸ್ ತನ್ನ 126 ಕ್ಷೇತ್ರಗಳಿಗೆ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಶೇ.80 ರಿಂದ 90 ಭಾಗ ಗೆಲುವು ಸಾಧಿಸುವ ಅಭ್ಯರ್ಥಿಗಳನ್ನೇ ವರಿಷ್ಠರು ಕಣಕ್ಕೆ ಇಳಿಸಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಮಧು ಬಂಗಾರಪ್ಪ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ ಸ್ವತಂತ್ರವಾಗಿ ಚುನಾವಣೆ ಎದುರಿಸುತ್ತದೆ ಎಂದು ಪಕ್ಷದ ವರಿಷ್ಠರೇ ಸ್ಪಷ್ಟಪಡಿಸಿರುವುದರಿಂದ ಹೊಂದಾಣಿಕೆಯ ಮಾತೇ ಇಲ್ಲವೆಂದು ಹೇಳಿದರು. ಶಾಸಕ ಮಧುಬಂಗಾರಪ್ಪ ಸತ್ಯ ಹರಿಶ್ಚಂದ್ರನಾ ಎಂದು ಮಾಜಿ ಶಾಸಕ ಸ್ವಾಮಿರಾವ್ ಹೇಳಿಕೆ ಪ್ರತಿಕ್ರಿಯಿಸಿದ ಶಾಸಕ ಮಧು ಬಂಗಾರಪ್ಪ, ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅಗತ್ಯವಿಲ್ಲ. ರಾಜಕಾರಣದಲ್ಲಿ ಸ್ವಾಮಿರಾವ್ ಮೂಲೆಗುಂಪಾಗಿದ್ದಾರೆ. ನಾನು ಸತ್ಯ ಹರಿಶ್ಚಂದ್ರ ಹೌದಾ ಅಥವಾ ಅಲ್ಲವಾ ಎಂಬುದನ್ನು ಕ್ಷೇತ್ರದ ಜನ ಹಾಗೂ ಪಕ್ಷದ ಕಾರ್ಯಕರ್ತರು ನಿರ್ಧರಿಸುತ್ತಾರೆ ಎಂದು ತಿರುಗೇಟು ನೀಡಿದರು. ಸೊರಬ ಕ್ಷೇತ್ರದಲ್ಲಿ ಬಿಜೆಪಿ ಶಾಸಕರ ಭ್ರಷ್ಟಾಚಾರದ ಪಟ್ಟಿ ಬಿಡುಗಡೆ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಮಧುಬಂಗಾರಪ್ಪ, ಬಿಜೆಪಿ ಬಿಡುಗಡೆ ಮಾಡಿರುವ ಚಾರ್ಜ್‍ಶೀಟ್‍ಗೆ ಬೇಲ್ ತೆಗೆದುಕೊಳ್ಳಬೇಕಾ, ಅದಕ್ಕೆ ಉತ್ತರಿಸಬೇಕಾದ ಅವಶ್ಯಕತೆ ಇಲ್ಲ. ಬಿಜೆಪಿಯವರ ಯೋಗ್ಯತೆ ಏನೆಂಬುದು ರಾಜ್ಯದ ಜನತೆಗೆ ತಿಳಿದಿದೆ. ಮಾಜಿ ಶಾಸಕರಾದ ಹೆಚ್.ಹಾಲಪ್ಪ, ಕುಮಾರ್ ಬಂಗಾರಪ್ಪ ಎಲ್ಲರ ಹಣೆಬರಹ ಗೊತ್ತಿದೆ. ಅವರ ಚಾರ್ಜ್‍ಶೀಟ್‍ಗೆ ಹೆದರುವುದಿಲ್ಲ ಎಂದು ಹೇಳಿದರು.


Edited By

Shruthi G

Reported By

hdk fans

Comments