ನಂಜನಗೂಡು ಕ್ಷೇತ್ರದಲ್ಲಿ 'ಕಮಲ' ಬಿಟ್ಟು 'ತೆನೆ' ಹೊತ್ತ ನಾಯಕ ಚುನಾವಣಾ ಅಖಾಡಕ್ಕೆ ಸಜ್ಜು..!!

16 Mar 2018 1:11 PM |
32351 Report

ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರ ಸಮೀಪಿಸುತ್ತಿದಂತೆ ಜೆಡಿಎಸ್ ಭರ್ಜರಿ ಸಿದ್ಧತೆಯಲ್ಲಿದೆ. ಬೇಸರಗೊಂಡಿರುವ ವಿಪಕ್ಷಗಳ ನಾಯಕರು ಜೆಡಿಎಸ್ ನತ್ತ ಹೆಜ್ಜೆಹಾಕಿದ್ದಾರೆ. ಇನ್ನು ಹಲವು ನಾಯಕರು ಜೆಡಿಎಸ್ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಚುರುಕು ಪಡೆದುಕೊಂಡಿದೆ. ಇತ್ತೀಚೆಗಷ್ಟೆ ನಂಜನಗೂಡಿನಲ್ಲಿ ನಡೆದ ಕುಮಾರ ಪರ್ವ ಸಮಾವೇಶದಲ್ಲಿ  ದಯಾನಂದ ಮೂರ್ತಿಯನ್ನ ನಂಜನಗೂಡಿನ ಅಧಿಕೃತ ಅಭ್ಯರ್ಥಿಯೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದ್ದರು. ಇದಾದ ಬಳಿಕ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಗೊಂಡ ದಯಾನಂದ ಮೂರ್ತಿಯವರನ್ನು ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಹೆಜ್ಜೆಗೆ ದಯಾನಂದ ಮೂರ್ತಿ ತೆನೆ ಹೊತ್ತ ಮಹಿಳೆಯ ಕೈ ಹಿಡಿದಿದ್ದು, ಜೆಡಿಎಸ್ ಮನೆಯಲ್ಲಿ ಸಂಭ್ರಮ ಮನೆ ಮಾಡುವಂತೆ ಮಾಡಿದೆ. ಈ ಎಲ್ಲ ಬೆಳವಣಿಗೆಗಳು ನೋಡುತ್ತಿದರೆ ಜೆಡಿಎಸ್ ಈ ಬಾರಿ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದು ಭರ್ಜರಿ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮೂಲಗಳು ತಿಳಿಸಿವೆ.

Edited By

Shruthi G

Reported By

hdk fans

Comments