ಖಾಕಿ ಬಿಟ್ಟು ಜೆಡಿಎಸ್ ನಿಂದ ಚುನಾವಣಾ ಅಖಾಡಕ್ಕಿಳಿಯಲು ಸಜ್ಜಾದ ಎಸಿಪಿ..!!

25 Mar 2018 1:56 PM |
14705 Report

ಆಧುನಿಕ ಜಗತ್ತಿನಲ್ಲಿ ಕಾವಿ, ಖಾಕಿ, ಖಾದಿ ಬಹಳ ಬಲಿಷ್ಠ. ಖಾಕಿ ಮತ್ತು ಖಾದಿಗೆ ಬಹಳ ನಂಟು, ಸ್ನೇಹ, ಹಲವಾರು ಬಾಂಧವ್ಯದಿಂದಲೇ ಪೊಲೀಸ್ ಅಧಿಕಾರಿಗಳು ಖಾಕಿ ಕಳಚಿ ರಾಜಕೀಯಕ್ಕೆ ಬರುತ್ತಿದ್ದಾರೆ. ತಮ್ಮ ವೃತ್ತಿ ಜೀವನದಲ್ಲಿಮಾಡಿದ ಸೇವೆ, `ಘನ' ಕಾರ್ಯಗಳನ್ನು ಮುಂದಿಟ್ಟುಕೊಂಡು ಪೊಲೀಸರು ರಾಜಕೀಯ ಪ್ರವೇಶ ಮಾಡುತ್ತಿರುವುದು ಈಗ ಸರ್ವೆ ಸಾಮಾನ್ಯವಾಗಿದೆ. ಹೆಸರಾಂತ ಪೊಲೀಸ್ ಅಧಿಕಾರಿಗಳಾದ ಎನ್.ಕೃಷ್ಣಪ್ಪ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಜ್ಜಾಗಿದ್ದಾರೆ.

ಎಸ್ಪಿಯಾಗಿ ನಿವೃತ್ತಿ ಹೊಂದಿರುವ ಎನ್.ಕೃಷ್ಣಪ್ಪ ಅವರು ದಳದ ಅಭ್ಯರ್ಥಿಯಾಗಿ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಯಸಿದ್ದಾರೆ.ಎನ್.ಕೃಷ್ಣಪ್ಪ ಅವರು ಯಲಹಂಕ ಪೊಲೀಸ್ ಠಾಣೆ ಮತ್ತು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಇನ್‍ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಸ್ವಂತ ಬಲದಿಂದ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಕವಿ ಡಾ. ಚೆನ್ನವೀರ ಕಣವಿ ಅವರ ಮನೆಗೆ ಭೇಟಿ ನೀಡಿದ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ನೆನಪಿನಲ್ಲಿ ನೀಡುವ ಸಾಹಿತ್ಯ ಬಂಗಾರ ಪ್ರಶಸ್ತಿ ಪ್ರದಾನ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು.

“ಈಗಾಗಲೇ ಜೆಡಿಎಸ್ ಮೊದಲ ಹಂತದಲ್ಲಿ 151 ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲವನ್ನೂ ಸರಿಪಡಿಸಲಾಗುವುದು” ಎಂದರು.

ಈ ಬಾರಿ ಮೈತ್ರಿಯಾಗುವ ಸಾಧ್ಯತೆ ಇದೆಯೇ ಎಂದು ಕೇಳಿದ ಪ್ರಶ್ನೆಗೆ “ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಯಾರಿಗೂ ಕಾಯುವ ಅವಶ್ಯಕತೆಯೂ ನಮಗಿಲ್ಲ. ಅದಕ್ಕಾಗಿಯೇ ನಾವು ನಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದೇವೆ. ಕೆಲ ಸಣ್ಣ ಪುಟ್ಟ ಬದಲಾವಣೆ ಮಾಡಿ ಇನ್ನುಳಿದ ಕ್ಷೇತ್ರಗಳಿಗೂ ಆದಷ್ಟು ಬೇಗ ಪಟ್ಟಿ ಬಿಡುಗಡೆಗೊಳಿಸಲಾಗುವುದು”  ಎಂದು ಕುಮಾರಸ್ವಾಮಿ ಹೇಳಿದರು.

ಶಾಸಕರಾದ ಮಧು ಬಂಗಾರಪ್ಪ, ಎನ್.ಹೆಚ್. ಕೋನರಡ್ಡಿ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು ಈ ಸಂದರ್ಭದಲ್ಲಿದ್ದರು.

Edited By

hdk fans

Reported By

hdk fans

Comments