ಮೈತ್ರಿ ಸರ್ಕಾರದ ಮೊದಲ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್..! ಇಲ್ಲಿದೆ ಬಜೆಟ್ ನ ಮುಖ್ಯ ಅಂಶಗಳು..!!

10 Jun 2018 4:10 PM |
8683 Report

ಜೆ.ಪಿ.ನಗರದ ಮುಖ್ಯಮಂತ್ರಿಗಳ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು, ರಾಜ್ಯದ ಜನರ ಸಮಸ್ಯೆಗಳನ್ನು ಬಗೆಹರಿಸಲು ರೂಪುರೇಷೆ ಸಿದ್ಧಪಡಿಸಲಾಗುತ್ತಿದ್ದು, ಬಜೆಟ್ ನಲ್ಲಿ ಅವುಗಳನ್ನು ಪ್ರಸ್ತಾಪಿಸುವುದಾಗಿ ತಿಳಿಸಿದರು.

ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಹೊಸ ಬಜೆಟ್‌ ಮಂಡಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಹಣಕಾಸು ಇಲಾಖೆಯ ಅಧಿಕಾರಿಗಳ ಜತೆ ಈಗಾಗಲೇ ಸಭೆ ನಡೆಸಲಾಗಿದೆ. ಅಲ್ಲದೇ, ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ಬಜೆಟ್‌ ಪೂರ್ವ ಸಭೆಗಳನ್ನು ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನದ ಕುರ್ಚಿ ಉಳಿಸಿಕೊಳ್ಳಲು ರಾಜಕೀಯ ಮಾಡುವುದಕ್ಕಿಂತ ಜನರ ಸಮಸ್ಯೆಗಳನ್ನು ಬಗೆಹರಿಸಲು ಆದ್ಯತೆ ನೀಡಲಾಗುತ್ತಿದೆ. ರಾಜಕೀಯ ಮಾಡಲು ಬೇರೆಯವರಿದ್ದಾರೆ. ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಐದು ವರ್ಷಗಳ ಕಾಲ ಸರ್ಕಾರ ಸುಭದ್ರವಾಗಿರಲಿದೆ. ಅಲ್ಲದೇ, ಕೆಲವು ಸಮಸ್ಯೆಗಳು ಇನ್ನೊಂದು ವಾರದಲ್ಲಿ ಬಗೆಹರಿಯಲಿವೆ. ಸರ್ಕಾರ ಪತನವಾಗಲಿದೆ ಎಂದು ಹಗಲುಗನಸು ಕಾಣುವವರು ಕಾಣುತ್ತಿರಲಿ ಎಂದು ಪ್ರತಿಪಕ್ಷ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದರು.

Edited By

Shruthi G

Reported By

hdk fans

Comments