ಲೋಕಸಭೆಯಲ್ಲೂ ಬಿಜೆಪಿಯನ್ನು ಉರುಳಿಸಲು ದೇವೇಗೌಡ್ರ ಈ ಮಾಸ್ಟರ್ ಪ್ಲಾನ್..!ಇಲ್ಲಿದೆ ಬಿಗ್ ಸೀಕ್ರೆಟ್..!!

28 Jun 2018 3:13 PM |
8259 Report

ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರ ಮಾಡಿರುವ ಮಾಜಿ ಪ್ರಧಾನಿ ದೇವೇಗೌಡ ಅವರು ಲೋಕಸಭೆಯಲ್ಲೂ ಕೂಡ ಮೋದಿಯನ್ನು ಸೋಲಿಸಲು ರಣತಂತ್ರ ಹೆಣೆಯುತ್ತಿದ್ದು, ಈ ನಿಟ್ಟಿನಲ್ಲಿ ಮೊದಲ ಭಾಗ ಎನ್ನುವಂತೆ ಕೆಲವು ಅಂಶಗಳನ್ನು ನವದೆಹಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಟ್ಟುಕೊಟ್ಟಿದ್ದಾರೆ.

ದೆಹಲಿಯಲ್ಲಿ ಕರ್ನಾಟಕ ಭವನದಲ್ಲಿ ಸುದ್ದಿಗೋಷ್ಠಿಯೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ ಅವರು, ಕಾಂಗ್ರೆಸ್ ಸಹಭಾಗಿತ್ವದಲ್ಲಿಯೇ ಲೋಕಸಭೆ ಚುನಾವಣೆಯನ್ನು ನಾವು ಎದುರಿಸುತ್ತಿದ್ದು ನಮ್ಮ ಮೈತ್ರಿಯಲ್ಲಿ ಬಿಎಸ್‍ಪಿ ಕೂಡಾ ಇರಲಿದೆ. ಹೀಗಾಗಿ ಜೆಡಿಎಸ್ ಪಾಲಿನ ಸೀಟುಗಳಲ್ಲಿ ಒಂದು ಸ್ಥಾನವನ್ನು ಬಿಎಸ್‍ಪಿಗೆ ಬಿಟ್ಟುಕೊಡುತ್ತೇವೆ. ಅಷ್ಟೇ ಅಲ್ಲದೇ ಉತ್ತರ ಪ್ರದೇಶದಲ್ಲಿ ಬಿಎಸ್‍ಪಿ ತನ್ನ ಕೆಲವು ಕ್ಷೇತ್ರಗಳನ್ನು ಕಾಂಗ್ರೆಸ್ಸಿಗೆ ಬಿಟ್ಟುಕೊಡಲಿದ ಅಂತ ಹೇಳಿದರು.ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‍ಗೆ ಎಷ್ಟು ಸ್ಥಾನ ಅಂತಾ ಇನ್ನು ಚರ್ಚೆಯಾಗಿಲ್ಲ.ಲೋಕಸಭೆ ಚುನಾವಣೆ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ನಡೆಯುವ ಸಾಧ್ಯತೆ ಇದೆ.ಈಗಾಗಲೇ ಪ್ರತಿಯೊಂದು ರಾಜ್ಯಕ್ಕೂ ಚುನಾವಣೆಯ ಸೂಚನೆಯನ್ನು ಬಿಜೆಪಿ ನೀಡುತ್ತಿದೆ. ಹೀಗಾಗಿ ಮುಂಗಾರು ಅಧಿವೇಶನವೇ ಕೊನೆಯ ಅಧಿವೇಶನ ಆದರೂ ಅಚ್ಚರಿ ಇಲ್ಲ ಅಂತ ಭವಿಷ್ಯ ನುಡಿದರು. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕೆಂಬ ಒಂದೇ ಕಾರಣಕ್ಕಾಗಿ ನಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಮರೆತು ಮೈತ್ರಿ ಮಾಡಿಕೊಂಡಿದ್ದೇವೆ. ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನಡೆಸುವುದು ನಮ್ಮ ಗುರಿಯಾಗಿದೆ. ಗೊಂದಲಗಳಿದ್ದರೆ ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ಪರಿಹರಿಸುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದರು.

Edited By

Shruthi G

Reported By

hdk fans

Comments