ನಿರುದ್ಯೋಗಿಗಳಿಗೆ ಬಂಪರ್ ಕೊಡುಗೆ ಕೊಟ್ಟ ಕುಮಾರಣ್ಣ..!ಜನಸಾಮಾನ್ಯರ ಸಮಸ್ಯೆಯನ್ನು ಆಲಿಸಲು ಹೊಸ ಐಡಿಯಾ..!

08 Jul 2018 3:27 PM |
5494 Report

ರಾಜ್ಯದ 30 ಜಿಲ್ಲೆಯ ಜಿಲ್ಲಾಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಲು ಒಂದು ದಿನ ಮೀಸಲಿಡಬೇಕು ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನಿರ್ದೇಶನ ನೀಡಿದ್ದಾರೆ. ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಜನತಾ ದರ್ಶನದಲ್ಲಿ ಅರ್ಜಿ ಸಲ್ಲಿಸಿರುವ 250 ನಿರುದ್ಯೋಗಿಗಳಿಗೆ ಉದ್ಯೋಗ ನೀಡಲು ಚಾಲನೆ ನೀಡಲಾಯಿತು.

ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಇದಕ್ಕಾಗಿಯೇ ನೇಮಕಗೊಂಡಿರುವ ತಂಡವು ವಿವಿಧ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ರಾಜ್ಯದ 30 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಜನಸಾಮಾನ್ಯರ ಸಮಸ್ಯೆಯನ್ನು ಆಲಿಸಲು ಸಮಯ ನಿಗದಿ ಮಾಡುವಂತೆ ಹಾಗೂ ಅಂಗವಿಕಲರು, ಬಡ ಹೆಣ್ಣು ಮಕ್ಕಳು, ನಿರುದ್ಯೋಗಿ ಯುವಕರ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಬಗೆಹರಿಸಲು ಸೂಚಿಸಿ ಸುತ್ತೋಲೆ ಹೊರಡಿಸಲಾಗುವುದು ಎಂದು ತಿಳಿಸಿದರು. ಈ ಕೆಲಸವನ್ನು ತಿಂಗಳಿಗೆ ಎರಡು ಬಾರಿ ಖುದ್ದು ಪರಿಶೀಲಿಸುವುದಾಗಿ ಮುಖ್ಯಮಂತ್ರಿ ತಿಳಿಸಿದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ನೇಮಕವಾಗಿರುವ ಪ್ರದಾನ ಕಾರ್ಯದರ್ಶಿಗಳು ತಿಂಗಳಿಗೊಮ್ಮೆ ನೆನೆಗುದಿಗೆ ಬಿದ್ದಿರುವ ಸಮಸ್ಯೆಗಳನ್ನು ಪರಿಶೀಲಿಸಿ ಮುಖ್ಯ ಕಾರ್ಯದರ್ಶಿಗಳ ಮುಖಾಂತರ ನನ್ನ ಗಮನಕ್ಕೆ ತರಲು ಸೂಚನೆ ನೀಡಲಾಗಿದೆ ಎಂದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ನೇಮಕವಾಗಿರುವ ಪ್ರದಾನ ಕಾರ್ಯದರ್ಶಿಗಳು ತಿಂಗಳಿಗೊಮ್ಮೆ ಕಡ್ಡಾಯವಾಗಿ ನೆನೆಗುದಿಗೆ ಬಿದ್ದಿರುವ ಸಮಸ್ಯೆಗಳನ್ನು ಪರಿಶೀಲಿಸಿ ಮುಖ್ಯ ಕಾರ್ಯದರ್ಶಿಗಳ ಮುಖಾಂತರ ನನ್ನ ಗಮನಕ್ಕೆ ತರಲು ಸೂಚನೆ ನೀಡಲಾಗಿದೆ ಎಂದರು.

Edited By

Shruthi G

Reported By

hdk fans

Comments