ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್..!

12 Jul 2018 9:39 AM |
3280 Report

ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಉಚಿತ ಬಸ್‌ ಪಾಸ್‌ ಘೋಷಿಸುವ ಸಾಧ್ಯತೆಯಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.

ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯ ಕಲ್ಪಿಸಲಾಗಿದೆ. ಅದರಂತೆ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್‌ ಪಾಸ್‌ ಸಿಗಬೇಕೆಂಬುದು ನನ್ನ ಆಶಯ. ಈ ಸಂಬಂಧ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅವರ ಬಳಿಯೇ ಹಣಕಾಸು ಖಾತೆ ಇರುವುದರಿಂದ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಶೇ.20ರಷ್ಟು ಟಿಕೆಟ್‌ ದರ ಏರಿಕೆ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಡೀಸೆಲ್‌ ದರ ಏರಿಕೆ, ಕಾರ್ಯಾಚರಣೆ ವೆಚ್ಚ ಹೆಚ್ಚಳವಾಗಿರುವುದರಿಂದ ದರ ಏರಿಕೆ ಮಾಡಬೇಕೆಂದು ಮನವಿ ಮಾಡಿದೆ. ಹಾಗಂತ ಏಕಾಏಕಿ ಟಿಕೆಟ್‌ ದರ ಏರಿಸಲು ಸಾಧ್ಯವಿಲ್ಲ. ಸರ್ಕಾರದ ಮಟ್ಟದಲ್ಲಿ ಚರ್ಚಿಸಿದ ಬಳಿಕವೇ ಈ ಸಂಬಂಧ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.

Edited By

Shruthi G

Reported By

hdk fans

Comments