ಇಂದು ರಾಜ್ಯದ ಜನರಿಗೆ ಹಾಗೂ ಬಿಪಿಎಲ್ ಕಾರ್ಡ್ ದಾರರಿಗೆ ಸಿಗಲಿದೆ ಈ ಬಂಪರ್ ಕೊಡುಗೆ..!?

12 Jul 2018 11:39 AM |
12784 Report

ಪೆಟ್ರೋಲ್-ಡೀಸೆಲ್ ಬೆಲೆ ಗಗನ ಮುಟ್ಟಿರುವ ಹಿನ್ನಲೆಯಲ್ಲಿ ವಾಹನ ಸವಾರರು ಈಗಾಗಲೇ ಹೈರಾಣಾಗಿದ್ದಾರೆ. ಇದರ ಜೊತೆಗೆ ರಾಜ್ಯ ಸರ್ಕಾರ ತನ್ನ ಬಜೆಟ್ ನಲ್ಲಿ ಪೆಟ್ರೋಲ್-ಡೀಸೆಲ್ ಮೇಲಿನ ಸೆಸ್ ಏರಿಕೆ ಮಾಡಿರುವ ಪರಿಣಾಮ ಬೆಲೆ ಮತ್ತಷ್ಟು ಏರಿದೆ.

ರಾಜ್ಯ ಸರ್ಕಾರದ ಈ ತೀರ್ಮಾನಕ್ಕೆ ಸಾರ್ವಜನಿಕರು, ವಿರೋಧ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಇಂದು ನಡೆಯುವ ಬಜೆಟ್ ಮೇಲಿನ ಚರ್ಚೆ ವೇಳೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸೆಸ್ ಕಡಿಮೆ ಮಾಡುವ ನಿರ್ಧಾರ ಪ್ರಕಟಿಸಲಿದ್ದಾರೆಂದು ಹೇಳಲಾಗುತ್ತಿದೆ. ಇದರ ಜೊತೆಗೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಈ ಹಿಂದಿನಂತೆ 7 ಕೆ.ಜಿ. ಅಕ್ಕಿ ನೀಡುವ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ. ಬಜೆಟ್ ನಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಿಸುವ ಪ್ರಮಾಣವನ್ನು 7 ಕೆ.ಜಿ.ಯಿಂದ 5 ಕೆ.ಜಿ.ಗೆ ಇಳಿಕೆ ಮಾಡಲಾಗಿದ್ದು, ಇದಕ್ಕೂ ಹಲವು ಶಾಸಕರು ವಿರೋಧ ವ್ಯಕ್ತಪಡಿಸಿದ್ದರು.

 

Edited By

Shruthi G

Reported By

hdk fans

Comments