ರೈತರ ಸಾಲ ಮನ್ನಾ ಕುರಿತು ಮತ್ತೊಂದು ಸಿಹಿಸುದ್ದಿ ನೀಡಲು ಸುಳಿವು ಕೊಟ್ಟ ಸಚಿವ ಬಂಡೆಪ್ಪ ಕಾಶೆಂಪುರ

18 Jul 2018 10:04 AM |
9802 Report

ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲ ಮನ್ನಾ ಮಾಡುವ ಸಂಬಂಧ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ ಹೇಳಿದ್ದಾರೆ.

ದಲಿತ ಏಕೀಕರಣ ಸಮಿತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ಸಾಲವನ್ನೂ ಮನ್ನಾ ಮಾಡುವತ್ತ ಸರಕಾರ ಚಿಂತನೆ ನಡೆಸಿದೆ. ಈ ಬಗ್ಗೆಯೂ ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಅಂತ ಭರವಸೆ ನೀಡಿದರು. ಇದೇ ವೇಳೆ ಅವರು ಮಾತನಾಡಿ ಬೀದಿ ಬದಿಯ ವ್ಯಾಪಾರಿಗಳಿಗಾಗಿ ಸಾಲ ನೀಡುವ ಸಲುವಾಗಿ ಬಡವರ ಬಂಧು ಹೆಸರಿನ ಯೋಜನೆಯನ್ನು ಶೀಘ್ರ ಜಾರಿಗೊಳಿಸಲಾಗುತ್ತದೆ. ಈ ಬಗ್ಗೆ ಕೂಡ ಸಿಎಂ ಎಚ್.ಡಿ ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎಂದು ಬಂಡೆಪ್ಪ ಕಾಶಂಪುರ ಹೇಳಿದರು.

Edited By

Shruthi G

Reported By

hdk fans

Comments