ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ ದೇವೇಗೌಡರ ಈ ಅಚ್ಚರಿ ಹೇಳಿಕೆ..!!

18 Jul 2018 12:21 PM |
13676 Report

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಇದೇ ಮೈತ್ರಿ ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಮುಂದುವರೆಯುತ್ತದೆ ಎಂಬ ಮಾತುಗಳ ನಡುವೆ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ನೀಡಿರುವ ಹೇಳಿಕೆಯೊಂದು ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.

ಜೆಡಿಎಸ್ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿರುವ ಹೆಚ್.ಡಿ. ದೇವೇಗೌಡರು, ಗ್ರಾಮ ಪಂಚಾಯಿತಿ ಚುನಾವಣೆಯಿರಲಿ ಅಥವಾ ಲೋಕಸಭಾ ಚುನಾವಣೆಯೇ ಆಗಲಿ ಏಕಾಂಗಿಯಾಗಿ ಎದುರಿಸೋಣ‌. ಕಾಂಗ್ರೆಸ್ ಪಕ್ಷವನ್ನು ನೆಚ್ಚಿಕೊಳ್ಳುವುದು ಬೇಡ ಎಂದು ಹೇಳಿರುವುದು ಮೈತ್ರಿಕೂಟ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲವೆಂಬ ಅಭಿಪ್ರಾಯಕ್ಕೆ ಕಾರಣವಾಗಿದೆ. ಜೆಡಿಎಸ್ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕಣ್ಣೀರಿಟ್ಟ ಘಟನೆಯ ಬಳಿಕ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದ್ದು, ಕಾಂಗ್ರೆಸ್ ನ ಕೆಲ ನಾಯಕರು ಕುಮಾರಸ್ವಾಮಿಯವರು ಸುಸೂತ್ರ ಆಡಳಿತ ನಡೆಸಲು ಅವಕಾಶವಾಗದಂತೆ ಅವರ ಮೇಲೆ ಒತ್ತಡ ಹೇರುತ್ತಿರುವುದು ದೊಡ್ಡಗೌಡರು ಗರಂ ಆಗಲು ಕಾರಣವೆನ್ನಲಾಗಿದೆ. ಹೀಗಾಗಿಯೇ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳದಿರುವ ಮೂಲಕ ಕಾಂಗ್ರೆಸ್ ನಾಯಕರಿಗೆ ಚುರುಕು ಮುಟ್ಟಿಸಲು ದೇವೇಗೌಡರು ನಿರ್ಧರಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Edited By

Shruthi G

Reported By

hdk fans

Comments