49 ಸಾವಿರ ಕೋಟಿ ರೈತರ ಸಾಲ ಮನ್ನಾ ಕುರಿತು ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕುಮಾರಣ್ಣ..!!

30 Jul 2018 2:41 PM |
10176 Report

ರಾಜ್ಯದಲ್ಲಿ ಸುಮಾರು 49 ಸಾವಿರ ಕೋಟಿ ರೂ. ಗಳಷ್ಟು ಬೃಹತ್ ಮೊತ್ತದ ಕೃಷಿ ಸಾಲ ಮನ್ನಾ ಮಾಡಲಾಗಿದ್ದು, ಈ ಕುರಿತು ನಾಲ್ಕೈದು ದಿನಗಳಲ್ಲಿ ಸರ್ಕಾರಿ ಆದೇಶ ಹೊರಡಿಸಲಾಗುವುದು.

ಈ ಯೋಜನೆಯನ್ನು ಪಾರದರ್ಶಕವಾಗಿ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಎಚ್’ಡಿಕೆ ಅವರು, ಸಾಲ ಮನ್ನಾ ಕಾರ್ಯಕ್ರಮ ಯಶಸ್ವಿಯಾಗಿ ನಿರ್ವಹಿಸುವಲ್ಲಿ ಜಿಲ್ಲಾಧಿಕಾರಿಗಳ ಪಾತ್ರ ಮಹತ್ವದ್ದು ಎಂದು ನುಡಿದರು. ಮಧ್ಯವರ್ತಿಗಳು ಈ ಯೋಜನೆಯ ದುರುಪಯೋಗ ಪಡೆಯದಂತೆ ಎಚ್ಚರಿಕೆ ವಹಿಸಿ ಎಂದು ಹೇಳಿದರು. ಜನರ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳನ್ನು ಬಗೆಹರಿಸಲು ಆದ್ಯತೆ ನೀಡಿ. ಪ್ರತಿ ತಿಂಗಳು ತಾಲ್ಲೂಕುಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಎಂದು ಸಲಹೆ ನೀಡಿದರು. ಮಾಧ್ಯಮಗಳಲ್ಲಿ ಸರ್ಕಾರದ ಕುರಿತು ಪ್ರಕಟಿಸುವ ವರದಿಗಳಿಗಿಂತ ಅಭಿವೃದ್ಧಿಗೆ ಆದ್ಯತೆ ನೀಡಿ. ಈ ಸರ್ಕಾರ 5 ವರ್ಷ ಯಶಸ್ವಿಯಾಗಿ ಪೂರ್ಣಗೊಳಿಸಲಿದೆ ಎಂದು ತಿಳಿಸಿದರು. ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಯುವಕರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಿ ಸ್ಥಳೀಯ ಕಾರ್ಖಾನೆಗಳಲ್ಲಿ ಉದ್ಯೋಗ ಕೊಡಿಸಲು ಅವಕಾಶ ಕಲ್ಪಿಸಬೇಕು. ಜನ ಸಾಮಾನ್ಯರನ್ನು ನೇರವಾಗಿ ಭೇಟಿ ಮಾಡುವಂತೆ ಸೂಚಿಸಿದರು.

Edited By

Shruthi G

Reported By

hdk fans

Comments