ಸದ್ಯದಲ್ಲೇ ರಾಜ್ಯ ಸರ್ಕಾರದಿಂದ SC/ST ನೌಕರರಿಗೆ ಸಿಗಲಿದೆ ಸಿಹಿಸುದ್ದಿ..!!

02 Aug 2018 12:50 PM |
1459 Report

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು SC/ST ನೌಕರರಿಗೆ ಸದ್ಯದಲ್ಲೇ ಸಿಹಿಸುದ್ದಿ ನೀಡಲಿದ್ದಾರೆ.

ಹೌದು.. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಅಧಿಕಾರಿ, ಸಿಬ್ಬಂದಿಗಳ ಬಡ್ತಿ ವಿಚಾರವಾಗಿ ಸಚಿವ ಸಂಪುಟದ ಮುಂದೆ ಚರ್ಚಿಸುವುದಾಗಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ವರ್ಗಗಳ ಮುಂಬಡ್ತಿಗೆ ಸಂಬಂಧಿಸಿದಂತೆ ಸಿಎಂ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಅಧಿಕಾರಿ, ಸಿಬ್ಬಂದಿಗಳ ಬಡ್ತಿ ಸಂಬಂಧದಲ್ಲಿ ರಾಜ್ಯ ಸರ್ಕಾರ ಮಾಡಿರುವ ಕಾಯ್ದೆಗೆ ರಾಷ್ಟ್ರಪತಿಗಳ ಅನುಮೋದನೆ ದೊರೆತಿದ್ದರೂ ಉಚ್ಛ ನ್ಯಾಯಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಈ ಕುರಿತು ಈ ಬಗ್ಗೆ ಸಂಪುಟದಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

Edited By

Shruthi G

Reported By

hdk fans

Comments