ಬಿಜೆಪಿಗೆ ಬಿಸಿತುಪ್ಪವಾಯ್ತು ಸಿಎಂ ಎಚ್’ಡಿಕೆಯ ಈ ರಾಮ ಬಾಣ..!ಕುಮಾರಣ್ಣ ನ ಈ ನಿರ್ಧಾರಕ್ಕೆ ನಡುಗಿ ಹೋದ ಬಿ.ಎಸ್.ವೈ..!!

06 Aug 2018 2:05 PM |
15203 Report

ಬೆಳಗಾವಿಯನ್ನು ಕರ್ನಾಟಕದ ಎರಡನೇ ರಾಜಧಾನಿಯಾಗಿ ಮಾಡುವ ನಿಟ್ಟಿನಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೀಡಿದ ಭರವಸೆ ವಿಚಾರದಲ್ಲಿ ಬಿಜೆಪಿಯು ಇಕ್ಕಟ್ಟಿಗೆ ಸಿಲುಕಿದಂತೆ ಕಂಡುಬಂದಿದ್ದು, ಈ ಸಂಬಂಧ ಪಕ್ಷದ ನಾಯಕರು ಎಚ್ಚರಿಕೆಯಿಂದ ಹೇಳಿಕೆಗಳನ್ನು ನೀಡುವಂತೆ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೂಕ್ಷ್ಮವಾಗಿ ಮೌಖಿಕ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿಯನ್ನು ಎರಡನೇ ರಾಜಧಾನಿಯಾಗಿ ಘೋಷಿಸುವ ವಿಚಾರದಲ್ಲಿ ಬಿಜೆಪಿ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿದೆ. ಒಂದು ವೇಳೆ ಘೋಷಿಸದಂತೆ ವಿರೋಧ ವ್ಯಕ್ತಪಡಿಸಿದರೆ, ಉತ್ತರ ಕರ್ನಾಟಕದ ಜನತೆಯ ವಿರೋಧ ವ್ಯಕ್ತವಾಗಲಿದೆ. ಘೋಷಿಸುವಂತೆ ಒತ್ತಾಯಿಸಿದರೆ ಬೆಳಗಾವಿ ಜಿಲ್ಲೆಯಲ್ಲಿನ ಮರಾಠ ಸಮುದಾಯದ ಮತದಾರರ ಒಲವು ಕಳೆದುಕೊಳ್ಳಬೇಕಾಗಿ ಬರಬಹುದು ಎಂಬ ಆತಂಕವಿದೆ. ಜತೆಗೆ ಭರವಸೆ ನೀಡಿದ ಕುಮಾರಸ್ವಾಮಿಗೆ ಸುಲಭವಾಗಿ 'ಮೈಲೇಜ್' ನೀಡಿದಂತಾಗುತ್ತದೆ. ಅಲ್ಲದೆ, ನೆರೆಯ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಮುಜುಗರ ಉಂಟಾಗಬಹುದೇನೋ ಎಂಬ ಕಾರಣಕ್ಕಾಗಿ ಎಚ್ಚರಿಕೆಯಿಂದ ಹೇಳಿಕೆಗಳನ್ನು ನೀಡುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿಯನ್ನು ಎರಡನೇ ರಾಜ ಧಾನಿಯಾಗಿ ಘೋಷಿಸುವ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ಹೇಳಿರುವುದು ನ್ಯಾಯಾಂಗ ನಿಂದನೆಯಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಹೀಗಾಗಿ, ಎರಡೂ ರಾಜ್ಯದ ಒಲವು ಗಳಿಸುವ ಆಲೋಚನೆಯಲ್ಲಿರುವ ರಾಜ್ಯದ ಬಿಜೆಪಿ ನಾಯಕರು, ಯಾವ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ದಿಕ್ಕು ತೋಚದಂತಾಗಿದ್ದಾರೆ. ಹೀಗಾಗಿ ಯಾವುದೇ ರೀತಿಯಲ್ಲಿ ದ್ವಂದ್ವ ಹೇಳಿಕೆಗಳನ್ನು ನೀಡಬಾರದು ಎಂದು ಪಕ್ಷದ ವತಿಯಿಂದ ಸೂಚನೆ ನೀಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.

 

Edited By

Shruthi G

Reported By

hdk fans

Comments