ಜೆಡಿಎಸ್ ನಾಯಕರಿಗೆ ಈ ಕಾರಣಕ್ಕೆ ವಿಧಾನಸೌಧಕ್ಕೆ ಬರದಂತೆ ಖಡಕ್ ಎಚ್ಚರಿಕೆ ಕೊಟ್ಟ ಸಿಎಂ ಎಚ್’ಡಿಕೆ..!!

09 Aug 2018 4:05 PM |
7709 Report

ವಿಧಾನಸೌಧಕ್ಕೆ ಬೇರೆ ಬೇರೆ ನೆಪ ಇಟ್ಟುಕೊಂಡು ಬರುವ ಜೆಡಿಎಸ್ ನಾಯಕರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಜೆಡಿಎಸ್ ಪಕ್ಷದ ಸಭೆಯೊಂದರಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ವಿಧಾನಸೌಧದಲ್ಲಿ ವರ್ಗಾವಣೆ, ಇತರ ಕೆಲಸ ಮಾಡಿಸಲು ಬರುವ ನಾಯಕರಿಂದ ಪಕ್ಷಕ್ಕೆ, ಮೈತ್ರಿ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ವಿಧಾನಸೌಧದಲ್ಲಿ ಜೆಡಿಎಸ್ ಶಾಸಕರಿಗಿಂತ ಹೆಚ್ಚು ಇತರ ನಾಯಕರೇ ಕಾಣಿಸಿಕೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ರೀತಿ ಬೇರೆ ಕೆಲಸ ಮಾಡಿಸಿಕೊಳ್ಳಲು ವಿಧಾನಸೌಧಕ್ಕೆ ಯಾರೂ ಬರಬೇಡಿ ಎಂದು ಸಿಎಂ ಕುಮಾರಸ್ವಾಮಿ ಅವರು ನಾಯಕರುಗಳಿಗೆ ಎಚ್ಚರಿಕೆ ನೀಡಿದ್ದಾರೆ.

Edited By

Shruthi G

Reported By

hdk fans

Comments