ದಾಖಲೆ : 82 ದಿನಗಳಲ್ಲಿ 43 ದೇವಾಲಯಗಳಿಗೆ ಭೇಟಿ ನೀಡಿದ ಕುಮಾರಣ್ಣ

15 Aug 2018 8:50 AM |
3216 Report

ಮುಖ್ಯಮಂತ್ರಿ ಯಾಗಿ ಅಧಿಕಾರ ಸ್ವೀಕರಿಸಿರುವ ಎಚ್.ಡಿ.ಕುಮಾರಸ್ವಾಮಿಯವರು 82 ದಿನಗಳ ಅವಧಿಯಲ್ಲಿ ಹೊಸ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈವರೆಗೂ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಯಾವುದೇ ಮುಖ್ಯಮಂತ್ರಿಗಳು ಅಲ್ಪಾವಧಿಯಲ್ಲಿ ಇಷ್ಟು ದೇವಸ್ಥಾನಗಳಿಗೆ ಭೇಟಿ ನೀಡಿದ ಉದಾಹರಣೆಗಳಿಲ್ಲ.

ಇಂದಿನ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಹರದನಹಳ್ಳಿಯ ಮನೆದೇವರ ದರ್ಶನ ಸೇರಿ 43 ದೇವಸ್ಥಾನಗಳಿಗೆ ಭೇಟಿ ಕೊಟ್ಟಂತಾಗುತ್ತದೆ. ಕುಮಾರಸ್ವಾಮಿ ಜೊತೆಗೆ ತಂದೆ, ಜೆಡಿಎಸ್‌ ವರಿಷ್ಠ ಹೆಚ್‌.ಡಿ. ದೇವೇಗೌಡ, ತಾಯಿ ಚೆನ್ನಮ್ಮ, ಪತ್ನಿಅನಿತಾ ಕುಮಾರಸ್ವಾಮಿ ದೇವಾಲಯದಲ್ಲಿ ಪೂಜಾ ಕೈಂಕರ್ಯಗಳಲ್ಲಿ ತೊಡಗಿದ್ದಾರೆ. ಹಾಸನದ ಹರದನಹಳ್ಳಿಯಲ್ಲಿನ ಈಶ್ವರ ದೇವಸ್ಥಾನದಲ್ಲಿ ಸೋಮವಾರದಂದು ಸುಮಾರು ಒಂದೂವರೆ ಗಂಟೆಗಳ ಕಾಲ ಧಾರ್ಮಿಕ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿಯವರ ಕುಟುಂಬ ಪಾಲ್ಗೊಂಡಿದೆ. ಇದಲ್ಲದೆ ಆದಿಚುಂಚನಗಿರಿ ಸೇರಿದಂತೆ ಇನ್ನಿತರ 6 ಮಠಗಳಿಗೂ ಕುಮಾರಸ್ವಾಮಿ ತಾವು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಭೇಟಿ ನೀಡಿದ್ದಾರೆ. ಜೋತಿಷ್ಯ ಹಾಗೂ ಧಾರ್ಮಿಕ ವಿಚಾರದಲ್ಲಿ ಅಪಾರವಾದ ನಂಬಿಕೆ ಇರುವುದರಿಂದ ಆಗಾಗ್ಗೆ ದೇವಸ್ಥಾನಗಳಿಗೆ ಭೇಟಿ ನೀಡುತ್ತಾರೆ ಎಂದು ಕುಟುಂಬದ ಆಪ್ತರು ಹೇಳಿದ್ದಾರೆ.

 

Edited By

hdk fans

Reported By

hdk fans

Comments