ಸಾಲ ಮನ್ನಾ ಕುರಿತು ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಹಕಾರ ಸಚಿವ ಬಂಡೆಪ್ಪ ಖಾಶೆಂಪೂರ

16 Aug 2018 10:09 AM |
5959 Report

ರೈತರ ಸಹಕಾರ ಚಾಲ್ತಿ ಸಾಲ ಮನ್ನಾ ಮಾಡಲಾಗಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಖಾಶೆಂಪೂರ ಅವರು ಹೇಳಿದ್ದಾರೆ.

ನಗರದ ಪೊಲೀಸ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನಡೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು,  ರೈತರ ಒಂದು ಲಕ್ಷದವರೆಗಿನ ಮೊದಲ ಹಂತದ ಸಹಕಾರಿ ಚಾಲ್ತಿ ಸಾಲ ಮನ್ನಾ ಮಾಡಲಾಗಿದೆ. ಇದರಿಂದ ಸರ್ಕಾರದ ಖಜಾನೆಯಿಂದ 9448 ಕೋಟಿ ರೂ. ಭರಿಸಲು ಸಚಿವ ಸಂಪುಟ ಅನುಮೋದನೆ ಕೂಡ ನೀಡಿದೆ ಎಂದು ಸ್ಪಷ್ಟಪಡಿಸಿದರು. ಮೈತ್ರಿ ಸರ್ಕಾರದ ಆಡಳಿತದಲ್ಲಿ ಸಿಎಂ ಕುಮಾರಸ್ವಾಮಿ ಅವರು ಮುಂದಿನ ದಿನಗಳಲ್ಲಿ ರಾಷ್ಟ್ರೀಕೃತ ಬ್ಯಾಂಕ್​ಗಳಲ್ಲಿರುವ ರೈತರ 37 ಸಾವಿರ ಕೋಟಿ ರೂ. ಸಾಲ ಮನ್ನಾ ಯೋಜನೆ ಕೂಡ ಜಾರಿ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದರು.

 

Edited By

hdk fans

Reported By

hdk fans

Comments