ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್..! ಸಾಲ ವಿತರಣೆ ಯೋಜನೆ ಎರಡು ಮಹತ್ವದ ನಿರ್ಧಾರ ಪ್ರಕಟ..!

21 Aug 2018 2:54 PM |
6788 Report

ಬಹು ನಿರೀಕ್ಷಿತ ಕೃಷಿ ಸಾಲ ಮನ್ನಾ ಯೋಜನೆ ವಿಸ್ತರಣೆ ಹಾಗೂ ಸಾಲ ವಿತರಣೆ ಫಲಾನುಭವಿಗಳ ಹೆಚ್ಚಳ ಸಂಬಂಧ ರಾಜ್ಯ ಸರ್ಕಾರವು ಎರಡು ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ.

ಸಾಲ ವಿತರಣೆ ಯೋಜನೆಗೆ ಹೆಚ್ಚುವರಿಯಾಗಿ 15 ಲಕ್ಷ ಫಲಾನುಭವಿಗಳ ಸೇರ್ಪಡೆ. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಸಾಲ ಮನ್ನಾ ಎಂಬ ನಿಯಮಕ್ಕೆ ತಿದ್ದುಪಡಿ ತಂದು ಒಂದು ಕುಟುಂಬದ ಎಷ್ಟು ಜನರು ಸಾಲ ಮಾಡಿದ್ದರೂ ಮನ್ನಾ. ವಿಧಾನಸೌಧ ಹಾಗೂ ಜೆಡಿಎಸ್‌ ಕಚೇರಿಯಲ್ಲಿ ಪ್ರತ್ಯೇಕವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್‌ ಅವರು, ರಾಜ್ಯದ ಕೆಲವು ಕಡೆ ಅತಿವೃಷ್ಟಿಯಾದರೆ ಮತ್ತೊಂದೆಡೆ ಅನಾವೃಷ್ಟಿಯಿಂದ ರೈತ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ. ಈಗ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೆರವು ನೀಡಲಿದೆ ಎಂದರು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಕೃಷಿ ಸಾಲ ಮನ್ನಾ ಸೌಲಭ್ಯ ಎಂಬ ನಿಯಮವಿದೆ. ಇದಕ್ಕೆ ತಿದ್ದುಪಡಿ ತಂದು ಕೃಷಿ ಕುಟುಂಬದ ಎಷ್ಟೇ ಸದಸ್ಯರು ಸಾಲ ಪಡೆದಿದ್ದರೂ ಅವರು ಈ ಸಾಲ ಮನ್ನಾ ಫಲಾನುಭವಿಗಳಾಗಲಿದ್ದಾರೆ ಎಂದು ವಿಧಾನಸೌಧದಲ್ಲಿ ಸಚಿವರು ತಿಳಿಸಿದರು.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಹೊಸದಾಗಿ 15 ಲಕ್ಷ ರೈತರಿಗೆ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಸಹಕಾರ ಸಚಿವ ಬಂಡಪ್ಪ ಕಾಶೆಂಪೂರ್‌ ತಿಳಿಸಿದರು. ಜೆಡಿಎಸ್‌ ಕಚೇರಿ ಜೆಪಿ ಭವನದಲ್ಲಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹೊಸದಾಗಿ 15 ಲಕ್ಷ ರೈತರನ್ನು ಸಾಲದ ವ್ಯಾಪ್ತಿಗೆ ತರಲು ಯೋಜನೆ ರೂಪಿಸಲಾಗುತ್ತಿದೆ ಎಂದರು. ಕೆಲವು ಜಿಲ್ಲಾ ಸಹಕಾರಿ ಬ್ಯಾಂಕ್‌ಗಳು ಆರ್ಥಿಕ ಕಷ್ಟದಲ್ಲಿವೆ. ಇದನ್ನು ಗಮನದಲ್ಲಿಟ್ಟಿಕೊಂಡು ಪರ್ಯಾಯ ಮಾರ್ಗ ಕಂಡುಕೊಳ್ಳಲಾಗಿದೆ. ಸಹಕಾರಿ ಸಂಘಗಳ ಮೂಲಕ ಈಗಾಗಲೇ 22 ಲಕ್ಷ ರೈತರು ಸಾಲ ಪಡೆದಿದ್ದು, ಹೊಸದಾಗಿ 15 ಲಕ್ಷ ರೈತರ ವಿಸ್ತರಿಸಲು ಹಣಕಾಸು ಯೋಜನೆ ರೂಪಿಸಲಾಗುತ್ತಿದೆ ಎಂದರು. ಕೊಡಗಿನಲ್ಲಿ ಅತಿವೃಷ್ಟಿಯಿಂದ ಭಾರೀ ಅನಾಹುತ ಉಂಟಾಗಿದ್ದು, ರಾಜ್ಯಾದ್ಯಂತ ಸಹಾಯ ಹಸ್ತ ನೀಡಲಾಗುತ್ತದೆ. ನಾವು ಸಹ ನೊಂದವರಿಗೆ ಕೈಲಾದಷ್ಟು ನೆರವು ನೀಡುತ್ತೇವೆ ಎಂದು ತಿಳಿಸಿದರು.

Edited By

Shruthi G

Reported By

hdk fans

Comments