ರಾಜ್ಯ ಸರ್ಕಾರದಿಂದ BPL/APL ಕಾರ್ಡ್ ದಾರರಿಗೆ ಮತ್ತೊಂದು ಬಂಪರ್ ಆಫರ್..!5 ಲಕ್ಷ ರೂ ವೆಚ್ಚದ ಈ ಸೌಲಭ್ಯವನ್ನು ನಿಮ್ಮದಾಗಿಸಿಕೊಳ್ಳಿ..!!

24 Sep 2018 9:37 AM |
23429 Report

ಕೇಂದ್ರ ಸರ್ಕಾರವು 'ಆಯುಷ್ಮಾನ್ ಭಾರತ್' ಯೋಜನೆಗೆ ಚಾಲನೆ ನೀಡಿರುವ ಬೆನ್ನಲ್ಲೇ ರಾಜ್ಯದ 'ಆರೋಗ್ಯ ಕರ್ನಾಟಕ' ಯೋಜನೆಯನ್ನು ಕೇಂದ್ರದ ಯೋಜನೆಯೊಂದಿಗೆ ಒಗ್ಗೂಡಿಸಿ 'ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ' ಯೋಜನೆ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ರಾಜ್ಯದ ಪ್ರತಿ ಬಿಪಿಎಲ್ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರು.ವರೆಗೆ ಚಿಕಿತ್ಸಾ ವೆಚ್ಚ ಸರ್ಕಾರದ ವತಿಯಿಂದಲೇ ಭರಿಸುವುದಾಗಿ ಘೋಷಿಸಿದೆ. ಅಲ್ಲದೆ, ಎಪಿಎಲ್ ಕುಟುಂಬಗಳಿಗೂ ವಾರ್ಷಿಕ 1.5 ಲಕ್ಷ ರು.ವರೆಗೆ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಕೇಂದ್ರ ಸರ್ಕಾರದ ಅಂಕಿ-ಅಂಶಗಳ ಪ್ರಕಾರ ರಾಜ್ಯದ 62 ಲಕ್ಷ ಬಿಪಿಎಲ್ ಕುಟುಂಬಗಳಿಗೆ ಮಾತ್ರ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸಾ ಸೇವೆ ಲಭ್ಯ ವಾಗಲಿದೆ. ಈ 62 ಲಕ್ಷ ಕುಟುಂಬಗಳಿಗೆ ಶೇ.60 ರಷ್ಟು ಚಿಕಿತ್ಸಾ ವೆಚ್ಚವನ್ನು ಕೇಂದ್ರ ಸರ್ಕಾರ ಹಾಗೂ ಶೇ. 40ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುತ್ತದೆ. ಉಳಿದ 72 ಲಕ್ಷ ಕುಟುಂಬಗಳಿಗೆ 'ಆರೋಗ್ಯ ಕರ್ನಾಟಕ' ಯೋಜನೆಯಡಿಯಲ್ಲಿಯೇ ಶೇ.100 ರಷ್ಟು ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕು. ಹೀಗಾಗಿ ಎರಡೂ ಯೋಜನೆಗಳನ್ನು ಒಗ್ಗೂಡಿ ಸಲಾಗುವುದು. ಆರೋಗ್ಯ ಕರ್ನಾಟಕ ಯೋಜನೆಯಡಿ ಬರುವ 53 ಲಕ್ಷ ಬಿಪಿಎಲ್ ಕುಟುಂಬಗಳಿಗೆ 1.5 ಲಕ್ಷ ಬದಲಿಗೆ ರಾಜ್ಯ ಸರ್ಕಾರದ ವೆಚ್ಚದಲ್ಲೇ 5 ಲಕ್ಷ ರು.ವರೆಗೆ ಚಿಕಿತ್ಸಾ ವೆಚ್ಚ ಭರಿಸಲಾಗುವುದು. ಉಳಿದ 19 ಲಕ್ಷ ಎಪಿಎಲ್ ಕಾರ್ಡ್ ಕುಟುಂಬದವರೆಗೆ ಶೇ.30 ರಷ್ಟು ಶುಲ್ಕವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Edited By

Shruthi G

Reported By

hdk fans

Comments