ರಾಮನಗರದಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆಯ ಬಗ್ಗೆ  ದೇವೇಗೌಡರು ಹೇಳಿದ್ದೇನು..?

11 Oct 2018 10:40 AM |
3598 Report

  ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯು ನವೆಂಬರ್ 3 ರಂದು ನಡೆಯುತ್ತದೆ.  ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿಯವರು ಜೆಡಿಎಸ್ ಅಭ್ಯರ್ಥಿಯಾಗುವುದು ಖಚಿತವಾಗಿದೆ. ಪಕ್ಷದ ವರಿಷ್ಠರಾದ ಹೆಚ್.ಡಿ. ದೇವೇಗೌಡ ಈ ವಿಚಾರವನ್ನು ಅಧಿಕೃತವಾಗಿ ತಿಳಿಸಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ಬುಧವಾರ ರಾತ್ರಿ ರಾಮನಗರ ವಿಧಾನ ಸಭಾ ಕ್ಷೇತ್ರದ ಮುಖಂಡರೊಂದಿಗೆ ಸಭೆ ನಡೆಸಿದ ದೇವೇಗೌಡರು, ಈ ಚುನಾವಣೆಯಲ್ಲಿ ಸಿ.ಪಿ. ಯೋಗೇಶ್ವರ್ ಅಥವಾ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ ಅವರ ಪುತ್ರ ಚಂದ್ರಶೇಖರ್ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಒಟ್ಟಾಗಿ ಅನಿತಾ ಕುಮಾರಸ್ವಾಮಿಯವರ ಗೆಲುವಿಗೆ ಶ್ರಮಿಸುವಂತೆ ಹೇಳಿದ್ದಾರೆ.

Edited By

hdk fans

Reported By

hdk fans

Comments