ಕೊನೆಗೂ ಮಧು ಬಂಗಾರಪ್ಪನವರಿಗೆ ಒಲಿದ ಹುದ್ದೆ..! ಯಾವುದು ಗೊತ್ತಾ..?

13 Nov 2018 5:36 PM |
4849 Report

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಒಟ್ಟು 8 ಸಚಿವ ಸ್ಥಾನಗಳು ಖಾಲಿ ಇವೆ. ಇವುಗಳಲ್ಲಿ 6 ಸ್ಥಾನಗಳು ಕಾಂಗ್ರೆಸ್‌ಗೆ ಹಾಗೂ 2 ಸ್ಥಾನಗಳು ಜೆಡಿಎಸ್‌ಗೆ ಸಿಗಲಿವೆ.

ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಹಾಗೂ  ಸಕಲೇಶಪುರ ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರು ಜೆಡಿಎಸ್ ಸಂಪುಟವನ್ನು ಸೇರಲಿದ್ದಾರೆ ಎಂಬುದು ತಿಳಿದುಬಂದಿದೆ. ಆದ್ದರಿಂದ, ಮಧು ಬಂಗಾರಪ್ಪ ಅವರು  ಜೆಡಿಎಸ್ ಸಂಪುಟ ಸೇರುವುದಿಲ್ಲ ಎಂದು ಹೇಳಲಾಗುತ್ತಿದೆ. ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

Edited By

hdk fans

Reported By

hdk fans

Comments