ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮಣಿಸಲು ದೊಡ್ಡಗೌಡರ 'ರಣತಂತ್ರ'..!!

24 Dec 2018 5:15 PM |
1154 Report

ದೋಸ್ತಿ ಸರ್ಕಾರವನ್ನು ಉರುಳಿಸಲು ವಿರೋಧ ಪಕ್ಷದವರು ಸಾಕಷ್ಟು ಪ್ರಯತ್ನವನ್ನು ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ 3 ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಭರ್ಜರಿ ಯಶಸ್ಸು ಸಾಧಿಸಿದಂತಹ  ಬೆನ್ನಲ್ಲೇ ಈಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮಣಿಸಲು ಜೆಡಿಎಸ್ ರಣತಂತ್ರ ಹೆಣೆಯಲು ಮುಂದಾಗಿದೆ ಎನ್ನಲಾಗುತ್ತಿದೆ.

ಈ ನಿಟ್ಟಿನಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಜನವರಿ ಮೂರರಂದು ಜೆಡಿಎಸ್ ಲೋಕಸಭಾ ಸದಸ್ಯರು, ಶಾಸಕರು ಹಾಗೂ ನಾಯಕರುಗಳ ಸಭೆಯನ್ನು ಕರೆದಿದ್ದು, ಈ ಸಭೆಯಲ್ಲಿ ಚುನಾವಣೆ ಗೆಲುವಿಗಾಗಿ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಉಪ ಚುನಾವಣೆಯಂತೆ ಮುಂದಿನ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರೆಯಲಿದ್ದು, ಯಾವ್ಯಾವ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಬೇಕೆಂಬುದರ ಕುರಿತೂ ಜನವರಿ ಮೂರರ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.  ಈ ಬಗ್ಗೆ ಎಲ್ಲರಲ್ಲೂ ಕೂಡ ಸಾಕಷ್ಟು ಕೂತೂಹಲವಿದ್ದು ಜನವರಿ ಮೂರರವರೆಗೂ ಕಾಯಲೇ ಬೇಕಿದೆ.

Edited By

hdk fans

Reported By

hdk fans

Comments