ಶಾಸಕರ ರಾಜೀನಾಮೆಗೆ HDK ಕೊಟ್ರು ತಿರುಗೇಟು..!?

25 Dec 2018 11:39 AM |
13198 Report

ಈಗಾಗಲೇ ರಾಜ್ಯ ಸಚಿವ ಸಂಪುಟ ಪುನಾರಚನೆ ಹಿನ್ನಲೆಯಲ್ಲಿಯೇ ಕಾಂಗ್ರೆಸ್ ಪಕ್ಷದಲ್ಲಿ ತೀರ್ವ ಅಸಮಾಧಾನ ಹೆಚ್ಚಾಗಿದೆ. ಇದರೊಂದಿಗೆ ಬಿಜೆಪಿ ಕೂಡಾ  ದೋಸ್ತಿ ಸರ್ಕಾರದ ಬೆಳವಣಿಗೆ ಮೇಲೆ ಕಣ್ಣಿಟ್ಟಿದೆ, ಮತ್ತೊಂದೆಡೆ ಸರ್ಕಾರದ ಅಳಿವು, ಉಳಿವಿನ ಪ್ರಶ್ನೆ ಬಗ್ಗೆ ಸಿಎಂ ಕುಮಾರಸ್ವಾಮಿಯವರು ಸಖತ್ತಾಗಿಯೇ ತಿರುಗೇಟು ನೀಡಿದ್ದಾರೆ.

ಸಂಪುಟದಲ್ಲಿ ಸಚಿವ ಕೈತಪ್ಪಿರುವುದಕ್ಕೆ ರಾಮಲಿಂಗಾರೆಡ್ಡಿ, ರಮೇಶ್ ಜಾರಕಿಹೊಳಿ, ಶಾಮನೂರು ಸೇರಿದಂತೆ ಕೆಲವು ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. ಅಷ್ಟೇ ಅಲ್ಲ ಪಕ್ಷ ವಿರೋಧಿ ಚಟುವಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಕಾಂಗ್ರೆಸ್ ಎಚ್ಚರಿಕೆಯ ಸಂದೇಶ ನೀಡಿದೆ. ಮೇಲೊಬ್ಬ ಎಲ್ಲವನ್ನು ನೋಡುತ್ತಿರುತ್ತಾನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Edited By

hdk fans

Reported By

hdk fans

Comments