ಲೋಕಸಭಾ ಚುನಾವಣೆಗೆ ಮಂಡ್ಯದಿಂದ ನಿಖಿಲ್‌ ಕುಮಾರ್ ಸ್ಪರ್ಧೆ..? ನಿಜಾನಾ..?

26 Dec 2018 2:01 PM |
227 Report

ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಪ್ರಾಬಲ್ಯವನ್ನು ಸಾಧಿಸಿತ್ತು.. ಜೆಡಿಎಸ್‌ನ ಭದ್ರಕೋಟೆಯಾಗಿರುವ ಮಂಡ್ಯ ಜಿಲ್ಲೆಯಿಂದ  ದೇವೇಗೌಡರ ಕುಟುಂಬದವರು ಲೋಕಸಭೆ ಅಥವಾ ವಿಧಾನಸಭೆಯ ಅಖಾಡಕ್ಕೆ ಇಳಿಯುತ್ತಾರೆ ಎನ್ನುವ ಊಹಾಪೋಹಗಳು ಹರಿದಾಡುತ್ತಿವೆ. ಇಂಥ ಪರಿಸ್ಥಿತಿಯಲ್ಲಿಯೂ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ಆಗಾಗ ಮಂಡ್ಯ ಜಿಲ್ಲೆಗೆ ಭೇಟಿ ನೀಡುತ್ತಿರುವುದು ತೀವ್ರ ಕುತೂಹಲವನ್ನು ಮೂಡಿಸಿದೆ.

ಮಂಗಳವಾರ ಮಂಡ್ಯ ಜಿಲ್ಲೆ ತೊಪ್ಪನಹಳ್ಳಿ ಗ್ರಾಮಕ್ಕೆ ಕುಮಾರಸ್ವಾಮಿ ಅವರ ಜೊತೆ ಭೇಟಿ ನೀಡಿದ ನಿಖಿಲ್‌ ಅವರು, ಹತ್ಯೆಗೀಡಾದ ಜೆಡಿಎಸ್‌ ಮುಖಂಡ ಪ್ರಕಾಶ್‌ ಪ್ರಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದರು. ಈ ಸಮಯದಲ್ಲಿ ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಈ ಹಿಂದೆಯೂ ಕನಕನಮರಡಿ ಬಸ್‌ ದುರಂತದ ವೇಳೆಯೂ ಜಿಲ್ಲೆಗೆ ಆಗಮಿಸಿ ಕುಟುಂಬ ವರ್ಗಕ್ಕೆ ಧೈರ್ಯ ತುಂಬಿದ್ದರು. ಅದಕ್ಕೂ ಮೊದಲು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದರು..  ಮಂಡ್ಯ ನಗರದಲ್ಲಿ ಲಾರಿ ಹರಿದು ಕಾರ್ಯಕರ್ತನೊಬ್ಬ ಮೃತಪಟ್ಟಾಗ ಜಿಲ್ಲೆಗೆ ಆಗಮಿಸಿ ಮಾಹಿತಿ ಪಡೆದುಕೊಂಡಿದ್ದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು.. ಹೀಗಾಗಿ ಎಲ್ಲರಲ್ಲೂ ತೀವ್ರ ಕುತೂಹಲ ಕೆರಳಿಸಿದೆ.

Edited By

hdk fans

Reported By

hdk fans

Comments