ಸಂಪುಟ ವಿಸ್ತರಣೆ ಹಿನ್ನಲೆಯಲ್ಲಿಯೇ ‘ಕೈ’  ನಾಯಕರಿಗೆ 'ಜೆಡಿಎಸ್' ನಾಯಕರು ಕೊಟ್ರು ಎಚ್ಚರಿಕೆ..?

27 Dec 2018 10:38 AM |
2021 Report

ಸಮ್ಮಿಶ್ರ ಸರ್ಕಾರ ರಚನೆಯಾದ ದಿನದಂದಲೂ ಕೂಡ ಸಾಕಷ್ಟು ತೊಂದರೆಗಳು ಎದುರಾಗುತ್ತಿವೆ. ಸಚಿವ ಸಂಪುಟ ರಚನೆಯಾದ ಮೇಲೂ ಕೂಡ ಇದೆ ಮುಂದುವರೆದಿದೆ.ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ರಾಜ್ಯದಲ್ಲೂ ಕಾಂಗ್ರೆಸ್ಸಿನ ಕೆಲವು ನಾಯಕರ ನಡವಳಿಕೆಯಲ್ಲಿ ತೀವ್ರ ಬದಲಾವಣೆ ಆಗಿದೆ. ಇದರ ಪರಿಣಾಮವೇ ಕೆಲವು ಪ್ರಮುಖ ನಿಗಮ ಮಂಡಳಿಗಳ ನೇಮಕ ಕುರಿತ ನಿರ್ಧಾರ ಕೈಗೊಳ್ಳುವಲ್ಲಿ ಕಾಂಗ್ರೆಸ್‌ ನಾಯಕರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್‌ ನಾಯಕರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದು ಮುಂದುವರೆದು ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ನಿರ್ದಿಷ್ಟಸಂಖ್ಯೆಯ ಲೋಕಸಭಾ ಸ್ಥಾನಗಳನ್ನು ಬಿಟ್ಟುಕೊಡಲು ಕಾಂಗ್ರೆಸ್‌ ಒಪ್ಪದೇ ಇದ್ದಲ್ಲಿ ಸ್ವಂತಿಕೆ ಕೈಬಿಟ್ಟು ಶರಣಾಗುವುದರಲ್ಲಿ ಅರ್ಥವಿಲ್ಲ. ಕಳೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಡೆದಂತೆ ಲೋಕಸಭಾ ಚುನಾವಣೆಯಲ್ಲೂ ಪೈಟ್ ಮಾಡೋಣ ಎಂಬ ಸಲಹೆಯನ್ನು ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದ ವರಿಷ್ಠ ನಾಯಕ ಎಚ್‌.ಡಿ.ದೇವೇಗೌಡ ಅವರಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ  ಹಿನ್ನಲೆಯಲ್ಲಿ ಜೆಡಿಎಸ್ ಕೈ ನಾಯಕರಿಗೆ ಸರಿಯಾಗಿಯೇ ತಿರುಗೇಟು ನೀಡಿದೆ.

Edited By

hdk fans

Reported By

hdk fans

Comments