ಲೋಕಸಭಾ ಚುನಾವಣೆಗೆ ದೇವೇಗೌಡರ ಕ್ಷೇತ್ರ ಯಾವುದು ಗೊತ್ತಾ..!?

01 Jan 2019 12:28 PM |
3284 Report

ಈಗಾಗಲೇ ಲೋಕಸಭಾ ಚುನಾವಣೆಗೆ ಎಲ್ಲ ಪಕ್ಷದವರು ಸಿದ್ದತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ  ಈಗಾಗಲೇ ಖಚಿತವಾಗಿದ್ದು, ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟು ಕೊಡುವುದಾಗಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ...

2019ರ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ  ಪಕ್ಷವಾದರೂ 5 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸಬೇಕು ಎಂಬುದು ಜೆಡಿಎಸ್ ಪಕ್ಷದ ಗುರಿಯಾಗಿದ್ದು,  ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡರೆ 12 ಕ್ಷೇತ್ರಗಳನ್ನು ಬಿಟ್ಟುಕೊಡಬೇಕು ಎಂದು ಪಕ್ಷ ಈಗಾಗಲೇ ತಿಳಿಸಿದೆ..  ಎಚ್.ಡಿ.ದೇವೇಗೌಡರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಎಲ್ಲಾ ರೀತಿಯ ಸಾಧ್ಯತೆ ಇದೆ ಎನ್ನಲಾಗಿದೆ..  ಬೆಂಗಳೂರು ರಾಜಕೀಯಕ್ಕೆ ಬರಲು ದೇವೇಗೌಡರು ತಯಾರಿ ನಡುಸುತ್ತಿದ್ದಾರೆ. ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಳ್ಳುವ ಸಮಯದಲ್ಲಿಯೇ ಬೆಂಗಳೂರು ಉತ್ತರ ಕ್ಷೇತ್ರದಿಂದ ಅಖಾಡಕ್ಕೆ ಇಳಿಯಬಹುದು ಎನ್ನಲಾಗಿದೆ.Edited By

hdk fans

Reported By

hdk fans

Comments