ಅಪ್ಪ ಮಗನ ಮಧ್ಯೆ ಶುರುವಾಯ್ತು ಪೈಪೋಟಿ..!!ದೇವೇಗೌಡರ ಚುನಾವಣಾ ಸ್ಪರ್ಧೆಗೆ ಅಡ್ಡಿಯಾದ್ರ ರೇವಣ್ಣ..!!
ಈಗಾಗಲೇ ಮುಂಬರುವ ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷದವರು ಎಲ್ಲಾ ರೀತಿಯ ತಯಾರಿಯನ್ನು ಮಾಡಿಕೊಳ್ಳುತ್ತಿದ್ದಾರೆ.. ಇದರ ನಡುವೆ ದೋಸ್ತಿ ಪಕ್ಷಗಳಾದ ಜೆಡಿಎಸ್ ಮತ್ತು ಕಾಂಗ್ರೆಸ್ ಜಿದ್ದಾಜಿದ್ದಿ ಏರ್ಪಡುವ ಸಾಧ್ಯತೆಯಿದೆ.. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಂಚಿಕೆಗೆ ಸಂಬಂಧಿಸಿದಂತೆ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಗಲಾಟೆ ಎದ್ದಿದೆ ಎನ್ನುವಂತಿದೆ...ಇತ್ತೀಚಿನ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನಕ್ಕೆ ಪ್ರಯತ್ನಿಸಿ ವಿಫಲರಾಗಿದ್ದ ಕಾಂಗ್ರೆಸ್ಸಿನ ಮಾಜಿ ಸಚಿವ ಹಾಗೂ ಹಾಲಿ ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಅವರು ಮುಂಬರುವ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಮನವಿಯನ್ನು ಮಾಡಿಕೊಂಡಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ರೇವಣ್ಣ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವುದಾಗಿ ತಿಳಿಸಿದರು. ಕಳೆದ ತಿಂಗಳು ನಡೆದ ಸಚಿವ ಸಂಪುಟ ವಿಸ್ತರಣೆ ವೇಳೆ ನನಗೆ ಸಚಿವ ಸ್ಥಾನ ನೀಡುವಂತೆ ಪಕ್ಷವನ್ನು ಒತ್ತಾಯಿಸಿದ್ದೆ. ಆದರೆ, ಅವಕಾಶ ಸಿಗಲಿಲ್ಲ. ಇನ್ನೇನು ವಿಧಾನ ಪರಿಷತ್ತಿನ ಸದಸ್ಯ ಸ್ಥಾನದ ಅವಧಿಯೂ ಮುಗಿಯುತ್ತಾ ಬಂದಿದೆ. ಇದನ್ನು ಗಮನದಲ್ಲಿಟ್ಟುಕೊಂಡು 2019ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಆಕಾಂಕ್ಷೆ ಯನ್ನು ಹೊಂದಿದ್ದೇನೆ. ಹಾಗಾಗಿ ಪಕ್ಷದ ಟಿಕೆಟ್ ನೀಡುವಂತೆಯೇ ಕಾಂಗ್ರೆಸ್ ನಾಯಕರಲ್ಲಿ ಮನವಿ ಮಾಡಿದ್ದೇನೆ. ಟಿಕೆಟ್ ದೊರೆಯುವ ವಿಶ್ವಾಸವಿದೆ. ಅಂತಿಮವಾಗಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ತಿಳಿಸಿದರು..




Comments