ನಿಖಿಲ್’ನನ್ನು  ನೆನಸಿಕೊಂಡು  ಕಣ್ಣೀರಿಟ್ಟ  ದೇವೆಗೌಡರು…!! ಯಾಕ್ ಗೊತ್ತಾ..?

04 Jan 2019 11:33 AM |
10639 Report

ರಾಜ್ಯದಲ್ಲಿ ದೋಸ್ತಿ ಸರ್ಕಾರ  ಬಂದ ಜನತೆಗೆ ಸಾಧ್ಯವಾದಷ್ಟು ಬೇಕಾದ ಸೌಲಭ್ಯಗಳನ್ನ ಒದಗಿಸುತ್ತಿದ್ದಾರೆ. ರಾಜ್ಯದ ರೈತರ ಸಾಲ ಮನ್ನಾ ಮಾಡುವ ವಿಚಾರದ ಕುರಿತಂತೆ ಮಾತನಾಡುವ ಸಮಯದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಪುತ್ರನ ಮೇಲೆ ಆಣೆ ಮಾಡಿದ್ದನ್ನು ನೆನಪಿಸಿಕೊಂಡು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಕಣ್ಣೀರಿಟ್ಟಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ದೇವೇಗೌಡರು, ಕುಮಾರಸ್ವಾಮಿಯವರಿಗೆ ಇರುವವನೊಬ್ಬನೇ ಮಗ. ರಾಜ್ಯದ ಜನರಿಗೋಸ್ಕರ ಕುಮಾರಸ್ವಾಮಿಯವರು ಮಗನ ಮೇಲೆ ಆಣೆ ಮಾಡಿದ್ದಾರೆ ಎಂದು ಕಣ್ಣೀರು ಹಾಕಿದ್ದಾರೆ.

ಬಿಜೆಪಿ ನಾಯಕ ಯಡಿಯೂರಪ್ಪ ಅಪ್ಪ-ಮಕ್ಕಳನ್ನು ತೆಗೆಯುತ್ತೇನೆ ಎಂದು ಹೇಳುತ್ತಿದ್ದಾರೆ. ನಮಗೆ ಇರುವುದು 38 ಸ್ಥಾನ ಮಾತ್ರ. ಸರ್ಕಾರ ರಚನೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಸರ್ಕಾರದ ಎಲ್ಲ ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು ಹೋಗಬೇಕೆಂದು ಷರತ್ತು ವಿಧಿಸಿದ್ದರು. ಅದರಂತೆ ಕುಮಾರಸ್ವಾಮಿ ನಡೆದುಕೊಳ್ಳುತ್ತಿದ್ದಾರೆ ಎಂದು ದೇವೇಗೌಡರು ತಿಳಿಸಿದರು.. ಒಟ್ಟಾರೆಯಾಗಿ ವಿರೋಧ ಪಕ್ಷಗಳು ದೋಸ್ತಿ ಸರ್ಕಾರವನ್ನು ಉರುಳಿಸಲು ಪ್ರಯತ್ನ ಮಾಡುತ್ತಿದೆ ಎಂಬುದು ಎಲ್ಲರಿಗೂ ಕೂಡ ತಿಳಿದೆ ಇದೆ...

Edited By

hdk fans

Reported By

hdk fans

Comments