ಬಿಜೆಪಿಯ 6 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ..!! ಹೊಸ ಬಾಂಬ್ ಸಿಡಿಸಿದ ‘ಜೆಡಿಎಸ್’ ಸಚಿವ..!!!

19 Jan 2019 9:18 AM |
2583 Report

ಈಗಾಗಲೇ ಆಪರೇಷನ್ ಕಮಲ ಮಾಡಲು ಹೋಗಿ ಬಾರೀ ಮುಖಭಂಗ ಅನುಭವಿಸಿರುವ ಬಿಜೆಪಿ ಇನ್ನೂ ಯಾಕೋ ಸುಮ್ಮನೆ ಆದ ಹಾಗೆ ಕಾಣುತ್ತಿಲ್ಲ… ರೆಸಾರ್ಟ್ ನಲ್ಲಿ ಬೀಡು ಬಿಟ್ಟಿರುವ ಕೆಲಶಾಸಕರನ್ನು ಮನವೊಲಿಸಲು ಬಿಜೆಪಿ ಶತ ಪ್ರಯತ್ನ ಮಾಡುತ್ತಿರುವುದು ಕೂಡ ಎಲ್ಲರಿಗೂ ಗೊತ್ತಿದೆ. ಬಿಜೆಪಿ ಶಾಸಕರು ರಾಜ್ಯಕ್ಕೆ ವಾಪಸ್ ಬಂದ ಮೇಲೆ ಯಾರು ಯಾರು ರಾಜೀನಾಮೆ ನೀಡುತ್ತಾರೆ ಎಂಬುದನ್ನು ಕಾದು ನೋಡಿ, ನಮ್ಮೊಂದಿಗೆ ಬಿಜೆಪಿಯ 6 ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಹೊಸ ಬಾಂಬ್ ಸಿಡಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಾ ರಾ ಮಹೇಶ್, ಕಾಂಗ್ರೆಸ್ ಜೆಡಿಎಸ್ ನಡುವೆ ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್ ಶಾಸಕರು ರೆಸಾರ್ಟ್ ಗೆ ಹೋಗಿರುವುದಕ್ಕೆ ಬೇರೆ ಅರ್ಥ ಕಲ್ಪಿಸುವ  ಯಾವುದೆ ಅಗತ್ಯ ಇಲ್ಲ. ಸಮ್ಮಿಶ್ರ ಸರ್ಕಾರವನ್ನು ಟೀಕಿಸುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ಸಾ.ರಾ. ಮಹೇಶ್ ವಾಗ್ದಾಳಿ ನಡೆಸಿದ್ದಾರೆ. ಇನ್ನು ಮಂಡ್ಯ ಲೋಕಸಭೆ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸಲು ಚಿಂತನೆ ನಡೆದಿದ್ದು, ಪಕ್ಷದ ವರಿಷ್ಠರು ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಆ ಸಂದರ್ಭದಲ್ಲಿ ತಿಳಿಸಿದರು..

Edited By

hdk fans

Reported By

hdk fans

Comments