ತಂದೆಯಂತೆಯೇ ನಾನೂ ಕೂಡ:  ಕಾಂಗ್ರೆಸ್ ಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ಸಿಎಂ ಕುಮಾರಸ್ವಾಮಿ..!!

31 Jan 2019 9:43 AM |
928 Report

ರಾಜಕೀಯ ವಲಯದಲ್ಲಿ ಇತ್ತಿಚಿಗೆ ಮಹತ್ವದ ಬೆಳವಣಿಗೆಗಳು ಆಗುತ್ತಿವೆ.. ಸಮ್ಮಿಶ್ರ ಸರ್ಕಾರ ರಚನೆಯಾದ ದಿನದಿಂದಲೂ ಕೂಡ ಒಂದಲ್ಲ ಒಂದು ವಿಘ್ನಗಳು ನಡೆಯುತ್ತಲೆ ಇವೆ.. ಈದೀಗ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ ತಂದೆಯೇ ಪಿಎಂ ಸ್ಥಾನ ಬಿಟ್ಟ ಬಂದಿರುವಾಗ ಮಗನಾಗಿ ನಾನು ಸಿಎಂ ಸ್ಥಾನ ಬಿಡಲು ಹಿಂದೇಟು ಹಾಕ್ತೀನಾ ಎಂದು ಪರೋಕ್ಷವಾಗಿ ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ. ಇದರಿಂದಾಗಿ ಸಮ್ಮಿಶ್ರ ಸರ್ಕಾರದಲ್ಲಿನ ಲೋಪಗಳು ಎದ್ದು ಕಾಣುವಂತಾಗಿವೆ…

ಅರಮನೆ ಮೈದಾನದಲ್ಲಿ ನಡೆದಂತಹ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿಯವರು,  ಜನರಿಗೆ ಮೋಸ ಮಾಡಿ ನಾನು ಏನು ಸಾಧನೆ ಮಾಡಲಿ.. ಸಿಎಂ ಸ್ಥಾನ ಬಿಡಲು ನನಗೆ ಕಷ್ಟ ಏನಿಲ್ಲ ಅಧಿಕಾರದಲ್ಲಿ ಶಾಶ್ವತವಾಗಿ ಇರೋದಕ್ಕೆ ಆಗುತ್ತಾ? 16 ಸೀಟು ಪಡೆದು ನನ್ನ ತಂದೆಯವರು ಪ್ರಧಾನಿಯಾಗಿದ್ದರು. ಬಳಿಕ ಸುಲಭವಾಗಿ ತಂದೆ ಸ್ಥಾನವನ್ನು ಬಿಟ್ಟು ಬಂದಿದ್ದಾರೆ. ಅಂತವರ ಮಗನಾಗಿ ಸಿಎಂ ಸ್ಥಾನ ಬಿಡಲು ನಾನು ಹಿಂದೇಟು ಹಾಕುತ್ತೇನಾ ಎಂಬ ಮಾತನ್ನು ಹೇಳಿದ್ದಾರೆ..  ಬೆಂಗಳೂರಿನಲ್ಲಿ 12 ವರ್ಷಗಳಿಂದ ನಿಂತಿದ್ದ ಕೆಲಸವನ್ನು ನಾನು ಪ್ರಾರಂಭ ಮಾಡಿದ್ದೇನೆ. ಎಷ್ಟು ದಿನ ಇಂತಹ ಮಾತು ನಾನು ಸಹಿಸಿಕೊಳ್ಳಲಿ. ಸರ್ಕಾರದಲ್ಲಿ ಕೆಲಸವಾಗಿಲ್ಲ ಅಂತ ಪಾಪ ಯಾರೋ ಒಬ್ಬರು ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ 1 ಲಕ್ಷ ಕೋಟಿ ರೂ. ಯೋಜನೆ ಕೊಟ್ಟಿರುವುದು ಅವರಿಗೆ ಗೊತ್ತಿಲ್ಲವೆಂದು ಅನಿಸುತ್ತದೆ ಎಂದು ಸಿಎಂ ಶಾಸಕ ಎಸ್.ಟಿ.ಸೋಮಶೇಖರ್ ಹೆಸರನ್ನು ಹೇಳದೇ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ ಎನ್ನಲಾಗಿದೆ.. ಒಟ್ಟಾರೆಯಾಗಿ  ಸಿಎಂ ನಾನು ಅಧಿಕಾರ ಬಿಡಬೇಕಾದ ಪರಿಸ್ಥಿತಿ ಬಂದರೆ ಖಂಡಿತಾ ಅಧಿಕಾರ ಬಿಡುತ್ತೇನೆ ಎಂಬ ಮಾತನ್ನು ಹೇಳಿರುವುದು ರಾಜಕೀಯ ಕ್ಷೇತ್ರದಲ್ಲಿ ತೀವ್ರ ಕುತೂಹಲ ಕೆರಳಿಸಿದೆ..

Edited By

hdk fans

Reported By

hdk fans

Comments