ಭೀಕರ ರಸ್ತೆ ಅಪಘಾತದಲ್ಲಿ ದೊಡ್ಡಬಳ್ಳಾಪುರದ ನಾಲ್ವರ ಸಾವು

14 Feb 2019 1:19 PM |
213 Report

ಕಾರು ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮವಾಗಿ ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಾರವಾಡ ಬಳಿ ನಡೆದಿದೆ. ದೊಡ್ಡಬಳ್ಳಾಪುರದ ಮೀನ, ರಮೇಶ್ ಮೃತರಾದವರು. ಒಬ್ಬ ಮಹಿಳೆ ಹಾಗೂ ಒಬ್ಬ ಪುರುಷ ಇಬ್ಬರ ಗುರುತು ಪತ್ತೆಯಾಗಿಲ್ಲ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಪಲ್ಲವಿ ಎಂದು ಗುರುತಿಸಲಾಗಿದ್ದು, ಗಾಯಾಳುವನ್ನು ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಗೋವಾದಿಂದ ಅಂಕೋಲದ ಮೂಲಕ ಮೂರು ಜನ ಮಹಿಳೆಯರು ಹಾಗೂ ಇಬ್ಬರು ಪುರುಷರು ಓರಿಸ್ಸಾ ನೊಂದಣಿ ಹೊಂದಿದ್ದ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅಂಕೋಲದ ಕಡೆಯಿಂದ ಬರುತ್ತಿದ್ದ ಟ್ಯಾಂಕರ್ ವೇಗದಲ್ಲಿ ಬಂದು ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಘಟನೆ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ.  ಮೋಜಿಗಾಗಿ ಗೋವಾಕ್ಕೆ ಹೋಗಿದ್ದರು ಎಂಬ ಮಾಹಿತಿ ದೊರೆತಿದೆ. ಮನೆಯಲ್ಲಿ ಬೆಂಗಳೂರಿಗೆ ಹೋಗುವುದಾಗಿ ತಿಳಿಸಿ ಗೋವಾಕ್ಕೆ ತೆರಳಿದ್ದರು. ಮೃತ ರಮೇಶ್ ದೊಡ್ಡಬಳ್ಳಾಪುರದಲ್ಲಿ ಸ್ಟುಡಿಯೋ ಇಟ್ಟುಕೊಂಡಿದ್ದರೆ, ಮೃತ ಮೀನಾ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದರು. ಗಾಯಗೊಂಡ ಪಲ್ಲವಿ ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಒಬ್ಬರಿಗೊಬ್ಬರು ಪರಿಚಯವಿದ್ದು, ಮನೆಯಲ್ಲಿ ಸುಳ್ಳು ಹೇಳಿ ಗೋವಾಕ್ಕೆ ತೆರಳಿದ್ದರು. ಆದರೆ ಮಾರ್ಗ ಮಧ್ಯೆ ಅಪಘಾತವಾಗಿ ಮೃತರಾಗಿ ಈಗ ಕುಟುಂಬಸ್ತರು ರೋಧಿಸುವಂತಾಗಿದೆ.  ಘಟನೆಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By

Ramesh

Reported By

Ramesh

Comments