‘ಇವರ’ ಮಾತು ಕೇಳಿ ಫುಲ್ ಟೆನ್ಷನ್ ಆದ ಅಪ್ಪ ಕುಮಾರಸ್ವಾಮಿ, ಮಗ ನಿಖಿಲ್…!! ಕಾರಣ ಏನ್ ಗೊತ್ತಾ..?

13 Mar 2019 10:20 AM |
2139 Report

ಈಗಾಗಲೇ ಲೋಕಸಭಾ ಚುನಾವಣೆಗಾಗಿ ಮಂಡ್ಯ ಅಖಾಡ ಬಹುತೇಕ ನಿಖಿಲ್ ಗೆ ಫಿಕ್ಸ್ ಆಗಿದೆ.. ಆ ಕಾರಣಕ್ಕಾಗಿಯೇ ಲೋಕಸಭೆ ಚುನಾವಣೆಗೆ ಮಂಡ್ಯದಿಂದ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ನೀಡುವ ಮೂಲಕ ಮಗನ ರಾಜಕೀಯ ಪ್ರವೇಶಕ್ಕೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿರುವ  ಸಿಎಂ ಕುಮಾರಸ್ವಾಮಿ ಜ್ಯೋತಿಷಿ ರಾಜಗುರು ದ್ವಾರಕಾನಾಥ್ ಅವರ ಮನೆಗೆ ನಿನ್ನೆ ರಾತ್ರಿ ಭೇಟಿ ನೀಡಿ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

ಜ್ಯೋತಿಷಿ ರಾಜುಗುರು ದ್ವಾರಕಾನಾಥ್ ಅವರ ಮನೆಗೆ ನಿನ್ನೆ ರಾತ್ರಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಗ ನಿಖಿಲ್ ಅವರನ್ನೂ ಕರೆದುಕೊಂಡು ಹೋಗಿದ್ದಾರೆ. ಆ ಸಂದರ್ಭದಲ್ಲಿ  ದ್ವಾರಕನಾಥ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಈ ವೇಳೆ ತಮ್ಮ ಮಗನ ರಾಜಕೀಯ ಭವಿಷ್ಯದ ಬಗ್ಗೆ ರಾಜಗುರು ದ್ವಾರಕನಾಥ್ ಬಳಿ ಚರ್ಚೆ ನಡೆಸಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.

ಮಾರ್ಚ್ 29 ರ ನಂತರ ನಿಖಿಲ್ ಜಾತಕದಲ್ಲಿ ಗುರು ಸ್ಥಾನ ಬದಲಾವಣೆ ಆಗುತ್ತದೆ. ಒಳ್ಳೆಯ ಗಳಿಗೆಯನ್ನು ನೋಡಿ ಮಂಡ್ಯದಿಂದ ನಾಮಪತ್ರ ಸಲ್ಲಿಸಿ, ಸದ್ಯಕ್ಕೆ ರಾಜಕೀಯ ಜೀವನದಲ್ಲಿ ಕಷ್ಟ ಇದೆ ಎಂದು ಜ್ಯೋತಿಷಿ ದ್ವಾರಕಾನಾಥ್ ಹೇಳಿದ್ದಾರೆ ಎನ್ನಲಾಗಿದೆ. ಇದರಿಂದ ಅಪ್ಪ ಕುಮಾರಸ್ವಾಮಿ ಮತ್ತು ಮಗ ನಿಖಿಲ್ ಫುಲ್ ಟೆನ್ಷನ್ ಆಗಿದ್ದಾರೆ.. ಯಾವಾಗಲೂ ಜಾತಕ ಭವಿಷ್ಯವನ್ನು ನಂಬುವ ಗೌಡರ ಕುಟುಂಬ ಈ ವಿಷಯವನ್ನು ಎಷ್ಟರ ಮಟ್ಟಿಗೆ ಪರಿಗಣನೆಗೆ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

Edited By

hdk fans

Reported By

hdk fans

Comments