ನಾನು ಈ ಬಾರಿ ಚುನಾವಣೆಗೆ ನಿಲ್ಲೋದಿಲ್ಲ ಅಂತ ಹೆಚ್.ಡಿ ದೇವೇಗೌಡರು ಹೇಳಿದ್ಯಾಕೆ..?

13 Mar 2019 3:35 PM |
1286 Report

ಲೋಕಸಭಾ ಚುನಾವಣೆಗೆ ದೇವೆಗೌಡರು ಯಾವ ಕ್ಷೇತ್ರದಿಂದ ಅಖಾಡಕ್ಕೆ ಇಳಿಯುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ… ಆದರೆ ಮಾಜಿ ಪ್ರಧಾನಿ ದೇವೆಗೌಡರು ನಾನು ಈ ಬಾರಿ ಚುನಾವಣೆಗೆ ನಿಲ್ಲಲ್ಲ. ನಾನು ಸ್ಪರ್ಧೆ ಮಾಡಲ್ಲ ಎಂದು ತಿಳಿಸಿದ್ದಾರೆ… ಅವರು ಇಂದು ಹಾಸನ ಜಿಲ್ಲೆ ಹೊಳೆನರಸೀಪುರ ತಾ. ಮೂಡಲಹಿಪ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರ ಜೊತೆ ಮಾತನಾಡಿದರು.

ಇದೇ ಸಮಯದಲ್ಲಿ ಗೌಡರು ಮಾತನಾಡುತ್ತಾ ಇನ್ನೂ 28 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್‍ಗೆ ಎಷ್ಟು ಹಾಗೂ ಜೆಡಿಎಸ್‍ಗೆ ಎಷ್ಟು ಎಂಬುದು ತೀರ್ಮಾನ ಆಗಿಲ್ಲ. ಅದೆಲ್ಲಾ ಅಂತಿಮವಾದ ನಂತರ ಮಾರ್ಚ್ 15 ರಂದು ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು. ಇನ್ನು ಇನ್ನೂ 28 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್‍ಗೆ ಎಷ್ಟು ಹಾಗೂ ಜೆಡಿಎಸ್‍ಗೆ ಎಷ್ಟು ಎಂಬುದು ತೀರ್ಮಾನ ಆಗಿಲ್ಲ. ಅಂತಿಮವಾದ ಬಳಿಕ ಮಾರ್ಚ್ 15 ರಂದು ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ… ಅಷ್ಟೆ ಅಲ್ಲದೆ ಇದು ನನ್ನ ಕೊನೆಯ ಚುನಾವಣೆ ಎಂದಿದ್ದಾರೆ .. ಈ ಬಾರಿ ಅಖಾಡಕ್ಕೆ ಇಳಿಯುತ್ತಾರೋ ಬಿಡುತ್ತಾರೋ ಗೊತ್ತಿಲ್ಲ… ಒಟ್ಟಿನಲ್ಲಿ ಸ್ಪರ್ಧಿಸಿದರೆ ಗೆಲವು ಖಚಿತ ಎನ್ನುವುದು ಎಂಬುದು ಜೆಡಿಎಸ್ ಮುಖಂಡರ ಮಾತಾಗಿದೆ..  

Edited By

hdk fans

Reported By

hdk fans

Comments